ಬೆಂಗಳೂರು: ಎಲ್ಲರೂ ಒಗ್ಗಟ್ಟಿನಿಂದ ಒಂದಾಗಿ ಹೋರಾಟ ನಡೆಸುವ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಿಸಬೇಕು. ಒಂದು ಸ್ಥಾನ ಕೂಡ ಕಡಿಮೆ ಆಗಬಾರದು. ಸ್ಪಷ್ಟ ಬಹುಮತ ಪಡೆಯುವ ಗುರಿ ಹೊಂದಬೇಕು ಎಂದು ರಾಜ್ಯದ ನಾಯಕರಿಗೆ ರಾಷ್ಟ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ಕೊಟ್ಟಿದ್ದಾರೆ.
ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ವಿಧಾನಸಭೆ ಚುನಾವಣೆಗೆ ರಣೋತ್ಸಹ ತುಂಬಿ, ಚುನಾವಣೆ ಗೆಲ್ಲುವ ಸೂತ್ರಗಳನ್ನು ಬಿಚ್ಚಿಟ್ಟರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ , ಮಲ್ಲಿಕಾರ್ಜುನ ಖರ್ಗೆ ಅವರೇ ನಿಮ್ಮ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬಿಜೆಪಿ ಪಕ್ಷದ ಕೋಮುವಾದ ಮತ್ತು ದ್ವೇಷದ ರಾಜಕಾರಣದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಿರಂತರವಾಗಿ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.
ವಿಧಾನಸಭೆ ಚುನಾವಣೆಯಲ್ಲಿ 150ಕ್ಕಿಂತ ಒಂದು ಸ್ಥಾನವೂ ಕಡಿಮೆಯಾಗಬಾರದು. ಅರ್ಹತೆ ಮತ್ತು ನಿಷ್ಠಾವಂತ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ. ಅಧಿಕಾರಕ್ಕೆ ಬಂದ ನಂತರವೂ ಪಕ್ಷಕ್ಕೆ ರಕ್ತ ಬಸಿಯುವವರಿಗೆ ಆದ್ಯತೆ ನೀಡಲಾಗುವುದು. ಪಕ್ಷದ ಹಿರಿಯ ನಾಯರೆಲ್ಲರೂ ಒಟ್ಟಿಗೆ ಹೋಗಬೇಕು. ಪ್ರತಿ ಕ್ಷೇತ್ರಕ್ಕೂ ನಾಯಕರು ಭೇಟಿ ಕೊಡಬೇಕು. ನೀವು ಕರೆದರೆ ನಾನು ರಾಜ್ಯದ ಮೂಲೆ ಮೂಲೆಗೂ ಬರುತ್ತೇನೆ. ಆದರೆ 150ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು.
ರೈತ ವಿರೋಧಿ ಕಾಯ್ದೆ ತಂದ ಬಿಜೆಪಿ ವಿರುದ್ದ ಹಾಗೂ ಕರ್ನಾಟಕದಲ್ಲಿ ಉದ್ಯೋಗ ಅವಕಾಶ ಇಲ್ಲ ಎನ್ನುವುದು ಚುನಾವಣೆ ವಿಚಾರ ಆಗಬೇಕು. ಆ ನಿಟ್ಟಿನಲ್ಲಿ ಹೋರಾಟ ಮಾಡಿ ಎಂದು ಸಲಹೆ ನೀಡಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…