ನವದೆಹಲಿ:ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯ ಇಂದು ಲಖನೌಗೆ ಭೇಟಿ ನೀಡಲಿದ್ದು, ಇವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಸಾಥ್ ನೀಡಲಿದ್ದಾರೆ.
“ನಾನಿಂದು ಲಖನೌಗೆ ನಿಮ್ಮನ್ನು ಭೇಟಿಯಾಗಲು ಬರುತ್ತಿದ್ದೇನೆ. ನಾವೆಲ್ಲರೂ ಒಟ್ಟಿಗೆ ಸೇರಿ ಹೊಸ ಮಾದರಿಯ ರಾಜಕೀಯವನ್ನು ಪ್ರಾರಂಭಿಸುವ ಭರವಸೆಯನ್ನು ಹೊಂದಿದ್ದೇನೆ. ಈ ರಾಜಕೀಯದಲ್ಲಿ ಎಲ್ಲರೂ ಪಾಲುದಾರರಾಗಿರುತ್ತಾರೆ. ನನ್ನ ಯುವ ಸ್ನೇಹಿತರು, ನನ್ನ ಸೋದರಿಯರು ಮತ್ತು ದುರ್ಬಲರು ಸೇರಿದಂತೆ ಎಲ್ಲರ ಧ್ವನಿಯೂ ಇಲ್ಲಿ ಕೇಳಿಸುತ್ತದೆ,” ಎಂದು ಕಾಂಗ್ರೆಸ್ ಶಕ್ತಿ ಆಪ್ ಮೂಲಕ ಆಡಿಯೋ ಮೆಸೇಜ್ ಮತ್ತು ಮತದಾರರಿಗೆ ಕರೆ ಮಾಡಿ ತಿಳಿಸಿದ್ದಾರೆ.
“ನನ್ನೊಂದಿಗೆ ಬನ್ನಿ. ಎಲ್ಲರೂ ಹೊಸ ಭವಿಷ್ಯ, ಹೊಸ ರಾಜಕೀಯವನ್ನು ರೂಪಿಸೋಣ. ಧನ್ಯವಾದಗಳು,” ಎಂದು ಸಂದೇಶ ಕಳುಹಿಸಿದ್ದಾರೆ.
ಏರ್ಪೋರ್ಟ್ನಿಂದ ಪಕ್ಷದ ಕಚೇರಿವರೆಗೆ ತಲುಪವವರೆಗೂ ನಡೆಸುವ ರೋಡ್ ಷೋಗಾಗಿ ಕಾಂಗ್ರೆಸ್ ಕಾರ್ಯಕರ್ತರು ಎಲ್ಲ ರೀತಿಯ ಸಿದ್ಧತೆಯನ್ನು ಕೈಗೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಶುರುಮಾಡಿದೆ. ನಾಳೆಯಿಂದ ಮೂರು ದಿನಗಳ ಕಾಲ ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…