ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ, ಭಾರತದ ಹೆಗ್ಗುರುತಾಗಲಿ : ಎಚ್.ಡಿ.ಕುಮಾರಸ್ವಾಮಿ -Vishwanews24
ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ. ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ. ಆದರೆ ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಆಶಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
1/4— H D Kumaraswamy (@hd_kumaraswamy) August 5, 2020
