ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ, ಭಾರತದ ಹೆಗ್ಗುರುತಾಗಲಿ : ಎಚ್.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ. ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ‌. ಆದರೆ ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಆಶಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago