ನವದೆಹಲಿ:ಎಲ್ಲ ರಾಜ್ಯ ಚುನಾವಣೆಗಳನ್ನು ಕೇವಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರೇ ಗೆಲ್ಲಿಸಲು ಸಾಧ್ಯವಿಲ್ಲ. ಬಿಜೆಪಿ ಇತರೆ ನಾಯಕರು ಶ್ರಮ ಹಾಕಬೇಕು ಎಂದು ಆರ್ ಎಸ್‌ಎಸ್ ಅಭಿಪ್ರಾಯ ಪಟ್ಟಿದೆ.
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ತನ್ನ ಸಂಪಾದಕೀಯದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಆರ್ ಎಸ್‌ಎಸ್, ದೆಹಲಿಯಲ್ಲಿ ಬಿಜೆಪಿ ತನ್ನ ಸಂಘಟನೆಯನ್ನು ಮತ್ತೆ ಆರಂಭಿಸಬೇಕು ಎಂದು ದೆಹಲಿ ಚುನಾವಣೆ ಫಲಿತಾಂಶ ಸ್ಪಷ್ಟ ಸಂದೇಶ ರವಾನಿಸಿದೆ ಎಂದು ಹೇಳಲಾಗಿದೆ.
ಬಿಜೆಪಿ 1700 ಅನಧಿಕೃತ ಕಾಲೊನಿಗಳನ್ನು ಅಧಿಕೃತ ಮಾಡಿ 40 ಲಕ್ಷ ಜನರಿಗೆ ನೆರವಾಗಿದ್ದರೂ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 2015ರ ಚುನಾವಣೆ ನಂತರ ಬಿಜೆಪಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರುತ್ತಿದೆ. ಇನ್ನು ಚುನಾವಣೆ ಅಂತಿಮ ಹಂತದಲ್ಲಿ ಪ್ರಚಾರ ಆರಂಭಿಸಿದ್ದು ಪಕ್ಷಕ್ಕೆ ಹಿನ್ನಡೆಯಾಗಿದೆ. ಹೀಗಾಗಿ ಕೇವಲ ನರೇಂದ್ರ ಮೋದಿ, ಅಮಿತ್ ಶಾ ಅವರ ಮೇಲೆ ಹೆಚ್ಚು ಜವಾಬ್ದಾರಿ ನೀಡದೆ ಪಕ್ಷದ ನಾಯಕರು ಶ್ರಮ ಹಾಕಬೇಕು ಎಂದು ಹೇಳಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…