ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:
ಮೊದಲು ವಂದೇ ಮಾತರಂ, ಬಳಿಕ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದೂ ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…