Featured

ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್ – vishwanews24

ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಜ.29 ರಂದು ಬಸ್ ಮಾಲಕರ ಸಂಘದೊಂದಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಎಸ್ಪಿ ಅವರು ತಿಳಿಸಿದ್ದಾರೆ.

ಮಾರ್ಚ್ ತಿಂಗಳವರೆಗೆ ಶಾಲೆಗಳು ಹಾಗೂ ಮಕ್ಕಳಿಗೆ ಪರೀಕ್ಷೆಗಳು ನಡೆಯಲಿರುವುದರಿಂದ ಹಾಗೂ ಜಿಲ್ಲೆಯ ಖಾಸಗಿ ಸೇರಿದಂತೆ ಎಲ್ಲಾ ಬಸ್‌ಗಳಿಗೆ ಹೊಸದಾಗಿ ಬಾಗಿಲುಗಳನ್ನು ಅಳವಡಿಸಲು ಸಾಕಷ್ಟು ಸಂಖ್ಯೆಯಲ್ಲಿ ಗ್ಯಾರೇಜ್‌ಗಳು ಇಲ್ಲದೇ ಇರುವುದರಿಂದ ಬಸ್ ಚಾಲಕರು ಹಾಗೂ ಮಾಲಕರ ಕೋರಿಕೆಯ ಮೇರೆಗೆ ಫೋಲ್ಡಿಂಗ್ ಮಾದರಿಯ ಬಾಗಿಲುಗಳನ್ನು ಅಳವಡಿಸಲು ಜೂನ್ 1ರವರೆಗೆ ಸಮಯವನ್ನು ನೀಡಲಾಯಿತು ಎಂದು ಅವರು ತಿಳಿಸಿದರು. ಆದರೆ ಇಂದಿನಿಂದಲೇ ಎಲ್ಲಾ ಬಸ್‌ಗಳ ದೃಢತೆ ಸರ್ಟಿಫಿಕೇಟ್ (ಫಿಟ್‌ನೆಸ್ ಸರ್ಟಿಫಿಕೇಟ್-ಎಫ್‌ಸಿ)ಗಳನ್ನು ನವೀಕರಿಸಲಾಗುವುದು. ಇದಕ್ಕೆ ಮುನ್ನ ಬಸ್‌ಗೆ ಜೂನ್ 1ರೊಳಗೆ ಪೋಲ್ಡಿಂಗ್ ಮಾದರಿಯ ಬಾಗಿಲನ್ನು ಅಳವಡಿಸದಿದ್ದರೆ ಎಫ್‌ಸಿಯನ್ನು ರದ್ದುಪಡಿಸುವ ಷರತ್ತನ್ನು ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಅಳವಡಿಸಿಕೊಳ್ಳದಿದ್ದರೆ ಮುಟ್ಟು ಗೋಲು:

ಅಲ್ಲದೇ ಜೂನ್‌1ರ ಬಳಿಕ ಯಾವುದೇ ಬಸ್ ಸುಸಜ್ಜಿತ ಬಾಗಿಲನ್ನು ಅಳವಡಿಸಿಕೊಳ್ಳದೇ ಇದ್ದರೆ ಅದನ್ನು ಮುಟ್ಟು ಗೋಲು ಹಾಕಿಕೊಳ್ಳುವ ಷರತ್ತಿಗೂ ಎಲ್ಲಾ ಖಾಸಗಿ ಬಸ್‌ಗಳ ಮಾಲಕರು ಸಂಪೂರ್ಣ ಒಪ್ಪಿಗೆಯನ್ನು ಸೂಚಿಸಿದ್ದು, ಜಿಲ್ಲಾಡಳಿತದ ಷರತ್ತನ್ನು ಶೇ.100ರಷ್ಟು ಅನುಷ್ಠಾನಗೊಳಿಸುವ ಭರವಸೆಯನ್ನೂ ಅವರು ನೀಡಿದ್ದಾರೆ ಎಂದು ಹರಿರಾಮ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago