ಮುಂಬೈ: ಯುಪಿಐ ಸೌಲಭ್ಯ(UPI facility) ಬಳಸಿಕೊಂಡು ಎಲ್ಲಾ ಬ್ಯಾಂಕುಗಳ ಎಟಿಎಂಗಳಲ್ಲಿ ಕಾರ್ಡು ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಸದ್ಯದಲ್ಲಿಯೇ ಜಾರಿಗೆ ತರಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಪ್ರಸ್ತುತ, ಎಟಿಎಂ ಮೂಲಕ ಕಾರ್ಡ್ ರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯವು ಕೆಲವು ಬ್ಯಾಂಕ್‌ಗಳಿಗೆ ಮಾತ್ರ ಸೀಮಿತವಾಗಿದೆ. UPI ಬಳಸಿಕೊಂಡು ಎಲ್ಲಾ ಬ್ಯಾಂಕ್‌ಗಳು ಮತ್ತು ATM ನೆಟ್‌ವರ್ಕ್‌ಗಳಲ್ಲಿ ಕಾರ್ಡುರಹಿತವಾಗಿ ಹಣ ಹಿಂಪಡೆಯುವ ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡಲು ಈಗ ಪ್ರಸ್ತಾಪಿಸಲಾಗಿದೆ. ವಹಿವಾಟಿನ ಸುಲಭತೆಯನ್ನು ಹೆಚ್ಚಿಸುವುದರ ಜೊತೆಗೆ, ಅಂತಹ ವಹಿವಾಟುಗಳಿಗೆ ಕಾರ್ಡ್‌ಗಳ ಅಗತ್ಯವಿಲ್ಲದಿರುವುದು ಕಾರ್ಡ್ ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್ ಮುಂತಾದ ವಂಚನೆಗಳನ್ನು ಕಡಿಮೆ ಮಾಡುತ್ತದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಇಂದು ಮುಂಬೈಯಲ್ಲಿ ಹಣಕಾಸು ನೀತಿ ಪರಾಮರ್ಶೆಯಲ್ಲಿ ವಿತ್ತೀಯ ನೀತಿ ಪ್ರಕಟಿಸುವ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿರುವ ಆರ್ ಬಿಐ ಗವರ್ನರ್ ವಿವರಣೆ ನೀಡಿದ್ದಾರೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಯ ಮೂಲಕ ಗ್ರಾಹಕರ ದೃಢೀಕರಣವನ್ನು ಸಕ್ರಿಯಗೊಳಿಸಲು ಪ್ರಸ್ತಾಪಿಸಲಾಗಿದೆ. ಆದರೆ ಅಂತಹ ವಹಿವಾಟುಗಳು ಎಟಿಎಂ ನೆಟ್‌ವರ್ಕ್‌ಗಳ ಮೂಲಕ ನಡೆಯುತ್ತದೆ ಎಂದು ಅಭಿವೃದ್ಧಿ ಮತ್ತು ನಿಯಂತ್ರಣ ನೀತಿಗಳ ಹೇಳಿಕೆ ತಿಳಿಸಿದೆ. ಎನ್‌ಪಿಸಿಐ, ಎಟಿಎಂ ನೆಟ್‌ವರ್ಕ್‌ಗಳು ಮತ್ತು ಬ್ಯಾಂಕ್‌ಗಳಿಗೆ ಶೀಘ್ರದಲ್ಲೇ ಪ್ರತ್ಯೇಕ ಸೂಚನೆಗಳನ್ನು ನೀಡಲಾಗುವುದು ಎಂದು ಅದು ಹೇಳಿದೆ.
ಭಾರತ್ ಬಿಲ್ ಪಾವತಿ ವ್ಯವಸ್ಥೆಗೆ (BBPS) ಸಂಬಂಧಿಸಿದಂತೆ, ಬಿಲ್ ಪಾವತಿಗೆ ಇದು ಇಂಟರ್‌ಆಪರೇಬಲ್ ಪ್ಲಾಟ್‌ಫಾರ್ಮ್ ಆಗಿದೆ, ವರ್ಷಗಳಲ್ಲಿ ಬಿಲ್ ಪಾವತಿ ಮತ್ತು ಬಿಲ್ಲರ್‌ಗಳ ಪ್ರಮಾಣದಲ್ಲಿ ಹೆಚ್ಚಳವನ್ನು ಕಂಡಿದೆ.BBPS ಮೂಲಕ ಬಿಲ್ ಪಾವತಿಗಳನ್ನು ಇನ್ನಷ್ಟು ಸುಲಭಗೊಳಿಸಲು ಮತ್ತು BBPS ನಲ್ಲಿ ಹೆಚ್ಚಿನ ಸಂಖ್ಯೆಯ ಬ್ಯಾಂಕೇತರ ಭಾರತ್ ಬಿಲ್ ಪಾವತಿ ಕಾರ್ಯಾಚರಣಾ ಘಟಕಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು, ಅಂತಹ ಘಟಕಗಳ ನಿವ್ವಳ ಮೌಲ್ಯದ ಅಗತ್ಯವನ್ನು 100 ಕೋಟಿಯಿಂದ ರೂಪಾಯಿಗಳಿಂದ 25 ಕೋಟಿ ರೂಪಾಯಿಗಳಿಗೆ ತಗ್ಗಿಸಲು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಸಹ ಶಕ್ತಿಕಾಂತ್ ದಾಸ್ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…