Featured

ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್ -Vishwanews24

ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್ -Vishwanews24

ನವದೆಹಲಿ: ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್ ಎಲ್ಲ ರೀತಿಯ ಆಟದಿಂದ ನಿವೃತ್ತಿ ಘೋಷಿಸುವ ಮೂಲಕ 18 ವರ್ಷಗಳ ಸುದೀರ್ಘ ಅವಧಿಯ ವೃತ್ತಿ ಜೀವನ ಅಂತ್ಯಕಂಡಿದೆ. 35 ವರ್ಷದ ಪಾರ್ಥಿವ್ 25 ಟೆಸ್ಟ್, 38 ಏಕದಿನ ಹಾಗೂ ಎರಡು ಟಿ20 ಪಂದ್ಯಗಳಲ್ಲಿ ಭಾರತ ಪರ ವಾಗಿ ಕಾಣಿಸಿಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ನಲ್ಲಿ ಗುಜರಾತ್ ಪರ 194 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು.

2002ರಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ ಅವರು ಟೆಸ್ಟ್ ನಲ್ಲಿ ಅತಿ ಕಿರಿಯ ವಿಕೆಟ್ ಕೀಪರ್ ಎಂಬ ಗೌರವಕ್ಕೆ ಪಾತ್ರರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಆರಂಭ ವನ್ನು ಪಡೆದರೂ, 2004ರಲ್ಲಿ ದಿನೇಶ್ ಕಾರ್ತಿಕ್ ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ಆಗಮದಿಂದ ಪಟೇಲ್ ತಮ್ಮ ಸ್ಥಾನವನ್ನು ಕಳೆದುಕೊಂಡರು.2004ರ ನವೆಂಬರ್ ನಲ್ಲಿ ಅಹಮದಾಬಾದ್ ನಲ್ಲಿ ನಡೆದ ಮೊದಲ ರಣಜಿ ಟ್ರೋಫಿ ಪಂದ್ಯದಲ್ಲಿ ಅವರು ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದರು.

2002ರ ಭಾರತ ಜೂನಿಯರ್ ವಿಶ್ವಕಪ್ ತಂಡದ ಕ್ಯಾಪ್ಟನ್ ಆಗಿದ್ದ ಅವರು ಅದೇ ವರ್ಷ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿ ಬಹಳ ಕ್ಷಿಪ್ರವಾಗಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆಗ ಅವರ ವಯಸ್ಸು 17 ವರ್ಷ 153 ದಿನ. ವಿಶ್ವದ ಅತಿ ಕಿರಿಯ ವಯಸ್ಸಿನ ವಿಕೆಟ್ ಕೀಪರ್ ಎಂಬ ದಾಖಲೆ ಬರೆದರು. ರಣಜಿ ತಂಡಕ್ಕೆ ಆಯ್ಕೆಯಾಗುವ 2 ವರ್ಷ ಮುನ್ನವೇ ಅವರು ಇಂಟರ್ನ್ಯಾಷನಲ್ ಟೆಸ್ಟ್​ಗೆ ಕಾಲಿಟ್ಟಿದ್ದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago