ಬೆಂಗಳೂರು: “ಬಿಜೆಪಿ ಸರ್ಕಾರವು ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು, ಈಗ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರು ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲ್ಲುವುದು ಖಚಿತ, ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, “ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ. ಜನರಿಗೂ ಅವರ ನಾಟಕ ತಿಳಿಸಿದೆ. ಅದಕ್ಕಾಗಿ ಬಿಎಸ್‌ವೈಯವರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ” ಎಂದರು.
“ಯಡಿಯೂರಪ್ಪ ರಾಜ್ಯ ಕಂಡ ಕಳಪೆ ಮುಖ್ಯಮಂತ್ರಿ. ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಬಿಜೆಪಿಯಲ್ಲಿ ಹೊಸದಾಗಿ ಚರ್ಚೆಯಾಗುತ್ತಿಲ್ಲ. ಮೊದಲಿನಿಂದಲೂ ಚರ್ಚೆ ನಡೆಯುತ್ತಿದೆ. ಆದರೆ ಪರ್ಯಾಯ ನಾಯಕ ಯಾರು ಎನ್ನುವ ಚಿಂತೆ ಬಿಜೆಪಿಯನ್ನು ಕಾಡುತ್ತಿರುವುದರಿಂದ ಇಲ್ಲಿಯವರೆಗೆ ಸುಮ್ಮನಿದ್ದಾರೆ” ಎಂದಿದ್ದಾರೆ.
ಇನ್ನು “ಹೈಕಮಾಂಡ್ ನಾಯಕರ ಮನವೋಲಿಸುವುದಕ್ಕಾಗಿ ಯಡಿಯೂರಪ್ಪ ಅನೇಕ ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಪಕ್ಷಕ್ಕೆ ನಿಷ್ಠನಾಗಿದ್ದೇನೆ ಎಂದು ತೋರಿಸುವ ಪಯತ್ನವಾಗಿ ರಾಜಿನಾಮೆ ನೀಡಲು ಸಿದ್ಧ ಎಂದಿದ್ದಾರೆ. ನಾವೇನು ಸರ್ಕಾರ ಬೀಳಿಸಲ್ಲ, ಅವರಾಗಿ ಬಿದ್ದು ಹೋದರೆ ಸರ್ಕಾರ ರಚಿಸಲು ನಾವು ರೆಡಿ” ಎಂದು ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…