ಹೊಸದಿಲ್ಲಿ: ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನ ಪ್ರಯಾಣದ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.
ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆಯೆಂದು ಮತ್ತು ಸರ್ಕಾರ ನಿಯಮಾವಳಿಗಳನ್ನು ಸಡಿಲಗೊಳಿಸಿರುವ ಕಾರಣಕ್ಕಾಗಿ ಪ್ರಸ್ತುತ ಮಾಸ್ಕ್ ಧರಿಸದೆಯೇ ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚೆಚ್ಚು ಕಂಡು ಬರುತ್ತಿವೆ. ಈ ನಿಟ್ಟಿನಲ್ಲಿ ಸಂಭಾವ್ಯ ಅಪಾಯಗಳನ್ನು ತಪ್ಪಿಸುವ ಕಾರಣಕ್ಕಾಗಿ ಡಿಜಿಸಿಎಯು ವಿಮಾನಯಾನಿಗಳಿಗಾಗಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ. ದೇಶದ ಎಲ್ಲ ವಿಮಾನ ನಿಲ್ದಾಣಗಳು ಹಾಗೂ ವಿಮಾನಗಳಲ್ಲಿ ಮಾಸ್ಕ್ ಧರಿಸುವುದು ಇನ್ನು ಮುಂದೆ ಕಡ್ಡಾಯ ಎಂದು ಬುಧವಾರ ಸೂಚನೆ ನೀಡಲಾಗಿದೆ.
ಮಾಸ್ಕ್ ಧರಿಸದ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸುವುದರೊಂದಿಗೆ ಮಾಸ್ಕ್ ಧರಿಸದೆ ಹಠದ ಧೋರಣೆ ತೋರಿಸದಲ್ಲಿ ಅದನ್ನು ಅಶಿಸ್ತು ಎಂದು ಪರಿಗಣಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಬಹುದು ಎಂದು ಸೂಚನೆಯಲ್ಲಿ ತಿಳಿಸಿಲಾಗಿದೆ. ವಿಮಾನಯಾನಿಗಳು ಮತ್ತು ಸಿಬಂದಿಗೆ ಕಠಿಣ ನಿಯಮ ಜಾರಿಗೊಳಿಸಬೇಕೆಂಬ ದಿಲ್ಲಿ ಹೈಕೋರ್ಟ್ ಜೂ. 3ರಂದು ಹೊರಡಿಸಿದ ಆದೇಶದ ಬೆನ್ನಲ್ಲೇ ಡಿಜಿಸಿಎ ಈ ಸೂಚನೆಗಳನ್ನು ಜಾರಿಗೊಳಿಸಿದೆ. ಯಾನಿಗಳಿಗೆ ಈ ಬಗ್ಗೆ ಮಾಹಿತಿ ನೀಡುವುದಕ್ಕೆಂದು ಪ್ರಕಟಣೆ ನೀಡಲು ಎಲ್ಲಾ ಏರ್‌ಲೈನ್‌ಗಳಿಗೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಪಡೆಗಳ ಸಹಕಾರದೊಂದಿಗೆ ದಂಡ ಮತ್ತು ಕ್ರಮ ಕೈಗೊಳ್ಳಬಹುದು ಎಂದು ನಿರ್ದೇಶನಾಲಯ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…