Featured

ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕು : ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಆದೇಶ -Vishwanews24

ಉಡುಪಿ, : ಉಡುಪಿಯ ಎಲ್ಲ ಅಧಿಕಾರಿಗಳು ಇನ್ನು ಪ್ರತಿ ಗುರುವಾರ ಸರಕಾರಿ ಬಸ್ ನಲ್ಲಿ ಓಡಾಟ ನಡೆಸಲಿದ್ದಾರೆ. ಈಗಾಗಲೇ ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸುತ್ತಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಇನ್ನು ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕೆಂದು ಆದೇಶಿಸಿದ್ದಾರೆ.

ಪ್ರತಿ ಗುರುವಾರ ಅಧಿಕಾರಿಗಳು ಸರಕಾರಿ ವಾಹನ ಉಪಯೋಗಿಸದೆ ಬಸ್ ನಲ್ಲಿ ಓಡಾಡುವ ಆದೇಶವನ್ನು ಹೊರಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ರಸ್ತೆಯಲ್ಲಿ ವಾಹನದಟ್ಟಣೆ ಕಡಿಮೆಯಾದರೆ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ.

ಮಾಲಿನ್ಯ ಕಡಿಮೆ ಆದರೆ ನಮ್ಮದೇ ಆರೋಗ್ಯ ಚೆನ್ನಾಗಿರುತ್ತದೆ. ಸಮಸ್ಯೆಯೂ ನಮ್ಮಿಂದ ಆಗುತ್ತಿದೆ ಅದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಹೊಂದಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ತಾವೇ ಸರಕಾರಿ ವಾಹನ ಬಿಟ್ಟು ವಾರದಲ್ಲಿ ಒಂದು ದಿನ ಬಸ್ ನಲ್ಲಿ ಕಚೇರಿಗೆ ತೆರಳುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಈ ಆದೇಶವನ್ನು ಪಾಲಿಸುತ್ತಿದ್ದಾರೆ.

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

52 minutes ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

57 minutes ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago