Featured

ಎಲ್ಲಿ ಎನೇ ನಡೆದರೂ ಬಿಜೆಪಿಯವರು ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ : ಜಮೀರ್ ಅಹ್ಮದ್ -Vishwanews24

ಎಲ್ಲಿ ಎನೇ ನಡೆದರೂ ಬಿಜೆಪಿಯವರು ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ : ಜಮೀರ್ ಅಹ್ಮದ್ -Vishwanews24

ಬೆಂಗಳೂರು, : ಎಲ್ಲಿ ಎನೇ ನಡೆದರೂ ಬಿಜೆಪಿಯವರು ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡುತ್ತಿದ್ದಾರೆ ಅವರಿಗೆ ಕನಸಿನಲ್ಲೂ ನಾನೇ ಬರುತ್ತಿದ್ದೇನೆ ಎಂದು ಶಾಸಕ ಜಮೀರ್ ಅಹ್ಮದ್ ಕಿಡಿಕಾರಿದ್ದಾರೆ.

ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಶಾಸಕ ಜಮೀರ್ ಅಹ್ಮದ್ ವಿರುದ್ಧ ಆರೋಪ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಜಮೀರ್ ಅಹ್ಮದ್, “ರೇಖಾ ಕದಿರೇಶ್ ನನ್ನ ಸಹೋದರಿಯಂತೆ, ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದದ್ದು, ಪಾಲಿಕೆ ಮಾಜಿ ಸದಸ್ಯರೊಬ್ಬರಿಗೆ ರಕ್ಷಣೆ ನಿಡಲು ಸಾಧ್ಯವಾಗುತ್ತಿಲ್ಲ ಎನ್ನುವುದಾದರೆ ಇಂತಹ ಬಿಜೆಪಿ ಸರ್ಕಾರ ಯಾಕೆ ಇರಬೇಕು? ತಮ್ಮ ತಪ್ಪುಗಳನ್ನು ಮುಚ್ಚಿಡಲು ಅನಗತ್ಯ ಆರೋಪ ಮಾಡುತ್ತಿದ್ದಾರೆ” ಎಂದರು.

ಇನ್ನು ಪೊಲೀಸರು ತನಿಖೆ ಕೈಗೊಳ್ಳುವ ಮೊದಲು ಬಿಜೆಪಿ ನಾಯಕರು ನನ್ನ ವಿರುದ್ಧ ಆರೋಪ ಮಾಡಲು ಪೊಲೀಸರು ಇವರಿಗೆ ತನಿಖೆ ಜವಾಬ್ದಾರಿ ಕೊಟ್ಟಿದ್ದಾರೆಯೇ? ಬಿಜೆಪಿ ನಾಯಕರು ತನಿಖೆ ನಡೆಸಲು ಎಂದಿನಿಂದ ಆರಂಭಿಸಿದರು?” ಎಂದು ಪ್ರಶ್ನಿಸಿದ್ದಾರೆ.

ರೇಖಾ ಅವರ ಪತಿ ಕದಿರೇಶ್ ಹತ್ಯೆ ನಡೆದಾಗಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಆದರೆ ಏನಾಯಿತು? ತನಿಖೆ ಬಳಿಕ ಸತ್ಯ ಹೊರಬಂತು. ಏನೇ ನಡೆದರೂ ಬಿಜೆಪಿ ನಾಯಕರಿಗೆ ನಾನೊಬ್ಬ ಕಾಣುತ್ತಿದ್ದೇನೆ” ಎಂದು ಕಿಡಿಕಾರಿದ್ದಾರೆ

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

7 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago