Featured

ಎಲ್ಲೂರು ಗ್ರಾಪಂ: ಒಂದೇ ವಾರ್ಡ್ ನಲ್ಲಿ ಮಾಜಿ ಅಧ್ಯಕ್ಷರಿಬ್ಬರಿಗೂ ಗೆಲುವು -Vishwanews24

ಎಲ್ಲೂರು ಗ್ರಾಪಂ: ಒಂದೇ ವಾರ್ಡ್ ನಲ್ಲಿಮಾಜಿ ಅಧ್ಯಕ್ಷರಿಬ್ಬರಿಗೂ ಗೆಲುವು

ಕಾಪು, : ಕುತೂಹಲ ಮೂಡಿಸಿದ್ದ ಎಲ್ಲೂರು ಗ್ರಾಮ ಪಂಚಾಯತ್ ನ ಕುಂಜೂರು ವಾರ್ಡ್ ನಲ್ಲಿ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಿಬ್ಬರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತೆ, ಗ್ರಾಪಂ ನಿಕಟ ಪೂರ್ವ ಅಧ್ಯಕ್ಷೆ ವಸಂತಿ ಮಧ್ವರಾಜ್ ಜಯಬೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಯಶವಂತ ಶೆಟ್ಟಿ 103 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ದೀಪಾ ಶೆಟ್ಟಿ 50 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಎಲ್ಲೂರು ಗ್ರಾಮ‌ ಪಂಚಾಯತ್ ನಲ್ಲಿ ಭಾರೀ ಜಿದ್ದಾಜಿದ್ದಿನ ಕ್ಷೇತ್ರವೆಂದೇ ಪರಿಗಣಿಸಿದ್ದ ಕುಂಜೂರು ವಾರ್ಡ್ ಗೆ ನಡೆದ ಚುನಾವಣೆಯಲ್ಲಿ ಸತೀಶ್ ಶೆಟ್ಟಿ, ಸುಕನ್ಯಾ ಆಚಾರ್ಯ, ಶಶಿಕಲಾ ಶೆಟ್ಟಿ ಹಾಗೂ ಅಮೀರುದ್ದೀನ್ ಸೋಲೊಪ್ಪಿಕೊಂಡಿದ್ದಾರೆ.

ಹಿಂದಿನ ಅವಧಿಯಲ್ಲಿ ಮುಖಾಮುಖಿ ಸ್ಪರ್ಧೆಯಲ್ಲಿ ಸತೀಶ್ ಶೆಟ್ಟಿ ಅವರು ಯಶವಂತ ಶೆಟ್ಟಿ ವಿರುದ್ಧ ಸೋತಿದ್ದರು. ಈ ಬಾರಿ ಅದಕ್ಕೆ ವಿರುದ್ಧವಾದ ಫಲಿತಾಂಶ ಬಂದಿದೆ‌.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

17 minutes ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

2 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

3 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

3 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

3 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

3 hours ago