Featured

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 1 ಕೋಟಿ 15 ಲಕ್ಷ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ – vishwanews24

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 1 ಕೋಟಿ 15 ಲಕ್ಷ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ ಇಂದು ಭವ್ಯವಾಗಿ ನೆರವೇರಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಒಟ್ಟು ರೂ. 1 ಕೋಟಿ 15 ಲಕ್ಷ ಮೊತ್ತದ ಅನುದಾನವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲಾಗಿದ್ದು, ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು (08 ಅಕ್ಟೋಬರ್ 2025) ನೆರವೇರಿಸಿದರು.

ಕಾರ್ಯಕ್ರಮದ ಅಂಗವಾಗಿ ಎಲ್ಲೂರು ಅದಮಾರು ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ಮಲ್ಟಿಪರ್ಪಸ್ ಸೆಂಟರ್ ಕಾಮಗಾರಿಗೆ 60 ಲಕ್ಷ ರೂ., ಮಡಿವಾಳ ತೋಟ ಹರೀಶ್ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಮಾಣಿಯೂರು ಕೋರ್ದಬ್ಬು ದೈವಸ್ಥಾನ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಹಾಗೂ ಎಲ್ಲೂರು ಗುತ್ತು ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಸೇರಿದಂತೆ ಒಟ್ಟು 90 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಇದೇ ವೇಳೆ ಉಳ್ಳೂರು ವಿಮಲ ಪೂಜಾರ್ತಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ, ತೆಂಕರಗುತ್ತು ರಸ್ತೆ ಅಭಿವೃದ್ಧಿಗೆ 5 ಲಕ್ಷ, ಮಾಣಿಯೂರು ಮಠ ರಸ್ತೆ ಅಭಿವೃದ್ಧಿಗೆ 5 ಲಕ್ಷ, ಕುಂಜೂರು ಶಾಂಭವಿ ಶೆಟ್ಟಿ ಮನೆ ಬಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ಹಾಗೂ ಪಾಂಡುರಂಗ ಭಜನಾ ಮಂದಿರದಲ್ಲಿ ಶೌಚಾಲಯ ಮತ್ತು ಸ್ನಾನದ ಕೋಣೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 25 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷೆ ಉಷಾ, ಸದಸ್ಯರು ಜಯರಾಮ ದೇವಾಡಿಗ, ಶಾಂತಿ ಆಚಾರ್ಯ, ವಸಂತಿ ಮಧ್ವರಾಜ್, ಹರೀಶ್ ಬೆಳ್ಳಿಬೆಟ್ಟು, ದಯಾನಂದ ಶೆಟ್ಟಿಗಾರ್, ಎಲ್ಲೂರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಹಾಗೂ ಸ್ಥಳೀಯ ಗಣ್ಯರಾದ ಹರೀಶ್ ಶೆಟ್ಟಿ, ಗಣೇಶ್ ಕುಲಾಲ್ ಎಲ್ಲೂರು, ಉದಯ ಅದಮಾರು, ಸದಾನಂದ ಪೂಜಾರಿ, ಸುಕೇಶ್ ಶೆಟ್ಟಿ ಉಳ್ಳೂರು, ರಾಜೇಂದ್ರ ಸಾಲಿಯಾನ್, ರಾಘವೇಂದ್ರ ರಾವ್ ಸೇರಿದಂತೆ ಅನೇಕ ಮಂದಿ ಭಾಗವಹಿಸಿದ್ದರು.

ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಬದ್ಧತೆ ಹಾಗೂ ಕಾರ್ಯತತ್ಪರತೆ ಮತ್ತೊಮ್ಮೆ ಸ್ಪಷ್ಟವಾಗಿದ್ದು, ಈ ಯೋಜನೆಗಳಿಂದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಅಭಿವೃದ್ಧಿಯ ನೂತನ ಅಧ್ಯಾಯ ಆರಂಭಗೊಳ್ಳಲಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

15 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

15 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

17 hours ago