ಕಾಪು: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತಕ್ಕೊಳಪಟ್ಟ ವೀರಾಂಜನೇಯ ಸನ್ನಿಧಿಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರಗಳನ್ನು ಕದ್ದೊಯ್ದ ಘಟನೆ ಸಂಭವಿಸಿದೆ.
ಗುರುವಾರ ರಾತ್ರಿ ಸುರಿದ ಬಾರೀ ಮಳೆಯ ಲಾಭಪಡೆದ ಕಳ್ಳರು ಆಂಜನೇಯ ಗುಡಿಯ ಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಆಂಜನೇಯ ವಿಗ್ರಹಕ್ಕೆ ಹೊದಿಸಲಾದ ಬೆಳ್ಳಿಯ ಕವಚ, ಪ್ರಭಾವಳಿ ಹಾಗು ಚಿನ್ನದ ಸರ, ಬೆಳ್ಳಿ ಕಾಲು ದೀಪಗಳನ್ನು ದೋಚಿಕೊಂಡು ಹೋಗಿದ್ದಾರೆ.ಶುಕ್ರವಾರ ಬೆಳಿಗ್ಗೆ ವಿರಾಂಜನೇಯ ಸನ್ನಿಧಿಗೆ ಅರ್ಚಕ ಸತ್ಯನಾರಾಯಣ ಆಚಾರ್ಯರವರು ಪೂಜೆಗಾಗಿ ತೆರಳಿದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ.
ಸ್ಥಳೀಯರಿಂದ ದೇವಸ್ಥಾನದ ಕೆರೆಯಲ್ಲಿ ಸೊತ್ತುಗಳ ಹುಡುಕಾಟ:
ಎಲ್ಲೂರು ಶ್ರೀ ವಿಶ್ವನಾಥ ಕ್ಷೇತ್ರವು ಇತಿಹಾಸ ಪ್ರಸಿದ್ದವಾಗಿದ್ದು ,ಈ ಬಾಗದಲ್ಲಿ ಯಾರೇ ಕಳ್ಳತನ ಮಾಡಿದರು ಸಿಕ್ಕಿ ಬೀಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ನಂಬಿಕೆ ಸ್ಥಳೀಯರದ್ದು, ಕಳ್ಳರು ಕಳ್ಳತನ ಮಾಡಿದ ಸುತ್ತುಗಳನ್ನು ಕೊಂಡೊಯ್ಯಲು ಸಾಧ್ಯವಾಗದೆ ಪಕ್ಕದಲ್ಲೇ ಇರುವ ದೇವಲದ ಕೆರಯಲ್ಲಿ ಎಸೆದು ಹೋಗಿರಲೂಬಹುದೆಂಬ ಸಂಶಯ ಕೂಡ ಸ್ಥಳೀಯರದ್ದಾಗಿದ್ದು, ಈ ನಿಟ್ಟಿನಲ್ಲಿ ಸ್ಥಳೀಯ ಯುವಕರು ಕೆರೆಗೆ ಹಾರಿ ಸೊತ್ತುಗಳ ಹುಡುಕಾಟ ನಡೆಸಿದ್ದಾರೆ. ಆದರೆ ಯಾವುದೇ ಸೊತ್ತುಗಳು ಕೆರೆಯಲ್ಲಿ ಪತ್ತೆಯಾಗಿಲ್ಲ.ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿರಾವ್ , ಪಡುಬಿದ್ರಿ ಪೊಲೀಸರು ,ಉಡುಪಿ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…