Featured

ಎಲ್ಲೂರು : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ -Vishwanews24

ಪಡುಬಿದ್ರಿ : ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ – ಪತಿಯೇ ಕೊಲೆ ಮಾಡಿರುವ ಶಂಕೆ

ಪಡುಬಿದ್ರಿ ಸಮೀಪದ ಎಲ್ಲೂರು ಗ್ರಾಮದ ಹಾಡಿಯಲ್ಲಿರುವ ಪಾಳುಬಿದ್ದ ಬಾವಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಎಲ್ಲೂರು ಗ್ರಾಮದ ರಕ್ಷಿತಾ(24) ಮೃತಪಟ್ಟ ಮಹಿಳೆ.

ಕಾಪುವಿನ ಫ್ಯಾನ್ಸಿ ಸ್ಟೋರ್‌‌ನಲ್ಲಿ ಕೆಲಸ ಮಾಡುತ್ತಿದ್ದ ರಕ್ಷಿತಾ ಅವರು ತಮ್ಮ ಸಹೋದ್ಯೋಗಿ ಸಂಜಯ ಆಚಾರಿ ಎಂಬಾತನೊಂದಿಗೆ 2 ವರ್ಷದ ಹಿಂದೆ ಮದುವೆ ಆಗಿದ್ದರು.

ನಂತರ ರಕ್ಷಿತಾಳ ತಾಯಿಗೆ ಹುಷಾರಿಲ್ಲದ ಕಾರಣ ಕಾಪುವಿನ ಎಲ್ಲೂರು ಕಂಚುಗಾರ ಕೇರಿ ಎಂಬಲ್ಲಿರುವ ತಾಯಿ ಮನೆಗೆ ಬಂದು ಗಂಡ ಹಾಗೂ ತಂದೆ ತಾಯಿಯೊಂದಿಗೆ ವಾಸವಾಗಿದ್ದರು.

ಈ ನಡುವೆ ಅ.3 ರಂದು ರಕ್ಷಿತಾ ಅವರ ಅವಳ ಗಂಡ ಸಂಜಯ್ ಹಾಗೂ ಅವರ ಜೊತೆ ಕೆಲಸ ಮಾಡುವ 3 ಜನ ಹುಡುಗಿಯರೊಂದಿಗೆ ರಕ್ಷಿತಾ ಅವರ ದೊಡ್ಡಮ್ಮನ ಮಗಳು ಶಕುಂತಳ ಎಂಬವರ ರವರ ಮನೆಗೆ ಬಂದು ರಕ್ಷಿತಾಳ ನಡತೆ ಸರಿ ಇಲ್ಲ ಎಂಬುದಾಗಿ ತಿಳಿಸಿ, ರಕ್ಷಿತಾ ಅವರನ್ನು ಅಲ್ಲಿಯೇ ಬಿಟ್ಟು ನಂತರ ಅದೇ ದಿನ ಸಂಜೆ ಬಂದು ಕರೆದುಕೊಂಡು ಹೋಗಿದ್ದ.

ಆ ನಂತರ ರಕ್ಷಿತಾ ಅವರ ಆರೋಗ್ಯ ವಿಚಾರಿಸಲು ಶಕುಂತಳ ಅವರು ಸಂಜಯ್ ಗೆ ಕರೆ ಮಾಡಿದಾಗ ಸರಿಯಾಗಿ ಸ್ಪಂದಿಸದೇ ಪತ್ನಿ ಯಾರೊಂದಿಗೋ ಹೋಗಿರಬೇಕು ಎಂದು ಉತ್ತರಿಸಿದ್ದಾನೆ.

ಅಲ್ಲದೆ ಈ ವೇಳೆ ರಕ್ಷಿತಾ ಅವರನ್ನು ಮನೆಯಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಆದರೆ ಅ.8 ರ ಸಂಜೆ ವೇಳೆ ಎಲ್ಲೂರು ಗ್ರಾಮದ ದಿ. ಪೊಲ್ಲಶೆಟ್ಟಿ ಎಂಬುವರ ಹಾಡಿಯಲ್ಲಿರುವ ಪಾಳುಬಿದ್ದ ಕೆಸರು ನೀರು ತುಂಬಿರುವ ದೊಡ್ಡ ಬಾವಿಯಲ್ಲಿ ರಕ್ಷಿತಾ ಅವರ ಮೃತದೇಹ ನೀರಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅದರಂತೆ ರಕ್ಷಿತಾ ಅವರು ಪಾಳು ಬಾವಿಗೆ ಬಿದ್ದಿರುವ ಅಥವಾ ಅವರನ್ನು ಇನ್ಯಾರೋ ದೂಡಿಹಾಕಿರುವ ಕಾರಣದಿಂದ ಆಕೆಯು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದ್ದು, ರಕ್ಷಿತಾರ ಮರಣದ ಬಗ್ಗೆ ಅವಳ ಗಂಡ ಸಂಜಯ ಆಚಾರಿಯ ಮೇಲೆ ಸಂಶಯವಿರುವುದಾಗಿ ಶಕುಂತಳಾ ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

7 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

7 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

8 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

9 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

9 hours ago