ಮೂಡುಬಿದಿರೆ: ಬಿಜೆಪಿಯಲ್ಲೀಗ ಸಂಘಟನಾ ಪರ್ವ ನಡೆದಿದೆ. ಎಲ್ಲೆಡೆ ಪಕ್ಷವನ್ನು ಸಂಘಟಿಸಿ ಬಲಿಷ್ಠಗೊಳಿಸುವ ಕಾರ್ಯದಲ್ಲಿ ಯಶಸ್ಸು ಕಾಣಬೇಕಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಕಾರ್ಕಳಕ್ಕೆ ತೆರಳುವ ಹಾದಿಯಲ್ಲಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿ ಇಲ್ಲಿನ ಹಳೆ ಪೋಲೀಸ್ ಠಾಣೆಯ ಬಳಿ ಪಕ್ಷದ ಪ್ರಮುಖರಿಂದ ಸ್ವಾಗತ ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಪಗಳು ಬಂದಾಗ ಅವುಗಳನ್ನು ಎದುರಿಸಬೇಕು. ಕಾನೂನಿಗೆ, ನ್ಯಾಯಾಲಯಕ್ಕೆ, ಸಂವಿಧಾನಕ್ಕೆ ಗೌರವ ಕೊಡಬೇಕೇ ಹೊರತು ಬೀದಿಯಲ್ಲಿ ನಿಂತು ಹೋರಾಟ ಮಾಡುವುದಲ್ಲ ಎಂದು ಡಿಕೆಶಿ ಪ್ರಕರಣಕ್ಕೆ ಸಂಬಂಧಿಸಿ ಅವರು ಹೇಳಿದರು.
ರಾಜ್ಯ ಸರ್ಕಾರ ನೆರೆ ನಿರಾಶ್ರಿತರಿಗೆ ಅತ್ಯುತ್ತಮ ಪರಿಹಾರ ನೀಡಲಿದೆ ಎಂದು ಪ್ರತಿಕ್ರಿಯಿಸಿದ ಅವರು ಸಂಸದರಾಗಿ ಪಕ್ಷ ಸಂಘಟನೆಯ ಜವಾಬ್ದಾರಿಯ ಸವಾಲನ್ನು ಸ್ವೀಕರಿಸಿ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.
ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಸುದರ್ಶನ ಎಂ, ಬಾಹುಬಲಿ ಪ್ರಸಾದ್, ಕೆ.ಕೃಷ್ಣರಾಜ ಹೆಗ್ಡೆ, ಶಾಂತಿ ಪ್ರಸಾದ್ ಹೆಗ್ಡೆ ರಾಜೇಶ್ ಮಲ್ಯ, ಪುರಸಭಾ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…