Featured

ಎಲ್ಲ ನಾಯಕರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲಪಡಿಸುವುದೇ ತಮ್ಮ ಮುಂದಿನ ಗುರಿ : ಬಿಜೆಪಿ ನೂತನ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ – Vishwanews24

ಮಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲಪಡಿಸುವುದೇ ತಮ್ಮ ಮುಂದಿನ ಗುರಿ ಎಂದು ಬಿಜೆಪಿ ನೂತನ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಪಕ್ಷದ ಅಧ್ಯಕ್ಷರಾಗಿ ತಮ್ಮ ತವರು ಜಿಲ್ಲೆಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ.ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡು ಇಷ್ಟು ದೊಡ್ಡ ಜವಾಬ್ದಾರಿ ನೀಡಿರುವುದಕ್ಕೆ ನಾನು ಋಣಿ ಎಂದರು.

ನಾನು ಸಂಘದ ಹಿನ್ನೆಲೆ ವೈಚಾರಿಕ ಸಿದ್ಧಾಂತದ ಆಧಾರದಲ್ಲಿ ಬಂದವನು. ಸಂಘ ನಮಗೆ ಕಲಿಸಿದ್ದು ಸಂಘಟನೆಯ ಕಾರ್ಯ ಮಾತ್ರ. ಕೆಲಸ ಮಾಡುತ್ತಿದ್ದೆ. ಆದರೆ ಯಾವುದೇ ನಿರೀಕ್ಷೆ ನನ್ನಲ್ಲಿರಲಿಲ್ಲ. ಪಕ್ಷವನ್ನು ವೈಭವ ಸ್ಥಿತಿಗೆ ಕೊಂಡೊಯ್ಯುವುದಷ್ಟೇ ನನ್ನ ನಿರೀಕ್ಷೆ.ಅದರ ಮಧ್ಯೆ ಪಕ್ಷ ಒಬ್ಬೊಬ್ಬರಿಗೆ ಒಂದೊಂದು ಜವಾಬ್ದಾರಿ ಕೊಡುತ್ತದೆ. ಆ ಜವಾಬ್ದಾರಿಯನ್ನು ನಿನ್ನೆ ಕೊಟ್ಟಿದ್ದಾರೆ. ಎಲ್ಲಾ ಹಿರಿಯ ಮತ್ತು ಕಿರಿಯರ ಮಾರ್ಗದರ್ಶನದಲ್ಲಿ ಸಂಘಟನೆಯ ಕಾರ್ಯವನ್ನು ಪಕ್ಷ ಬಲವರ್ಧನೆಗೆ ಮಾಡುತ್ತೇನೆಂಬ ವಿಶ್ವಾಸವಿದೆ ಎಂದರು.

ನಮ್ಮ ಪಕ್ಷದಲ್ಲಿ ಕಾರ್ಯಕರ್ತರನ್ನು ಬೆಳೆಸುವ ಪದ್ಧತಿ ಇದೆ. ಎಲ್ಲರೂ ಒಂದಾಗಿದ್ದು ಮಾರ್ಗದರ್ಶನ ಮಾಡುತ್ತಾರೆ. ಹೀಗಾಗಿ ಇಂದು ಕೊಟ್ಟಿರುವ ಜವಾಬ್ದಾರಿಗೆ ಎಲ್ಲಾ ಹಿರಿಯರು, ಕಿರಿಯರು ನಿಂತು ನನ್ನ ಬಳಿ ಈ ಕೆಲಸ ಮಾಡಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಾವು ತಂಡ ಮಾಡಿಕೊಂಡು ಕೆಲಸ ಮಾಡುತ್ತೇವೆ, ಯಾರೋ ಒಬ್ಬನೇ ಎಲ್ಲಾ ಕೆಲಸ ಮಾಡುವುದಿಲ್ಲ. ರಾಜಕೀಯದಲ್ಲಿ ಅಸಮಾಧಾನ ಸಾಮಾನ್ಯ. ಆದರೆ ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಯಡಿಯೂರಪ್ಪನವರು ನಮ್ಮ ಪಕ್ಷದ ಅತ್ಯಂತ ಹಿರಿಯ ನಾಯಕರು. ಅದೇ ರೀತಿ ಜಗದೀಶ್ ಶೆಟ್ಟರ್, ಸದಾನಂದಗೌಡ, ಈಶ್ವರಪ್ಪ ಹಾಗೂ ಪ್ರಹ್ಲಾದ್ ಜೋಷಿಯವರಂತಹ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಬಲವರ್ಧನೆ ಮಾಡುವಂತಹ ಶಕ್ತಿ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಈ ವೇಳೆ ಹೇಳಿದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

14 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago