ಬಿಜಾಪುರ: ಕೆಲವು ಮುಸ್ಲಿಮರು ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂಬುವುದರ ಕುರಿತಾದಂತೆ ಮಾತನಾಡಿದ ಅಹ್ಲೆ ಸುನ್ನತ್ ಜಮಾತ್ ಅಧ್ಯಕ್ಷ ಹಾಗೂ ಮುಸ್ಲಿಂ ವಿದ್ವಾಂಸ ಸೈಯದ್ ತನ್ವೀರ್ ಹಾಶ್ಮಿ, “ಎಲ್ಲರೂ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ” ಎಂದು ಕರೆ ನೀಡಿದ್ದಾರೆ.
“ಕೆಲವು ವ್ಯಕ್ತಿಗಳು ಕೋವಿಡ್ ಲಸಿಕೆಯ ಕುರಿತಾದಂತೆ ವದಂತಿಗಳನ್ನು ಹಬ್ಬುತ್ತಿದ್ದಾರೆ. ಈ ವದಂತಿಗಳಿಗೆ ಹಲವು ಮುಸಿಮರು ಬಲಿ ಬೀಳುತ್ತಿದ್ದಾರೆ” ಎಂದು ಅವರು ಹೇಳಿದರು.
ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24
“ವಿಜ್ಞಾನಿಗಳು ಮುಸ್ಲಿಮರಿಗೆ ಬೇರೆ, ಮುಸ್ಲಿಮೇತರರಿಗೆ ಬೇರೆ ಎಂಬಂತೆ ಲಸಿಕೆಗಳನ್ನು ತಯಾರಿಸಲಿಲ್ಲ. ಮುಸ್ಲಿಮರು ಲಸಿಕೆ ಹಾಕಿಸಿಕೊಳ್ಳದೆ ಇರಲಿ ಎಂಬ ಕಾರಣದಿಂದ ಯಾರೋ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ನಮ್ಮದೇ ಸಮುದಾಯದ ಹಲವು ಮಂದಿ ಈ ಕುರಿತಾದಂತೆ ವದಂತಿಗಳನ್ನು ಹಬ್ಬಿಸಿ ಜನರನ್ನು ಭಯಭೀತರನ್ನಾಗಿಸುತ್ತಿದ್ದಾರೆ” ಎಂದು ಅವರು ಹೇಳಿದರು.
“ತಜ್ಞರ ಪ್ರಕಾರ, ಯಾರೆಲ್ಲಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆಯೋ, ಅವರಲ್ಲಿ ಬಹುತೇಕರಿಗೆ ಕೋವಿಡ್ ಸೋಂಕು ಉಂಟಾಗಿಲ್ಲ. ಒಂದು ವೇಳೆ ಲಸಿಕೆ ಪಡೆದ ಬಳಿಕವೂ ಸೋಂಕು ಕಂಡು ಬಂದರೆ ಅದು ತೀವ್ರ ಪ್ರಮಾಣದಲ್ಲಿರುವುದಿಲ್ಲ ಮತ್ತು ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಎದುರಾಗುವುದಿಲ್ಲ. ಲಸಿಕೆ ಪಡೆದುಕೊಳ್ಳುವುದು ಸದ್ಯದ ಪರಿಸ್ಥಿತಿಯಲ್ಲಿ ಜೀವ ಉಳಿಸುವುದಕ್ಕಿರುವ ಮಾರ್ಗ” ಎಂದು ವೈದ್ಯರು ಹೇಳಿಕೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.
ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…