Featured

ಎಲ್ಲ ಮುಸ್ಲಿಮರೂ ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ : ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ -Vishwanews24

ಎಲ್ಲ ಮುಸ್ಲಿಮರೂ ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ : ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ -Vishwanews24

ಬಿಜಾಪುರ: ಕೆಲವು ಮುಸ್ಲಿಮರು ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ ಎಂಬುವುದರ ಕುರಿತಾದಂತೆ ಮಾತನಾಡಿದ ಅಹ್ಲೆ ಸುನ್ನತ್‌ ಜಮಾತ್‌ ಅಧ್ಯಕ್ಷ ಹಾಗೂ ಮುಸ್ಲಿಂ ವಿದ್ವಾಂಸ ಸೈಯದ್‌ ತನ್ವೀರ್‌ ಹಾಶ್ಮಿ, “ಎಲ್ಲರೂ ಕೋವಿಡ್‌ ವ್ಯಾಕ್ಸಿನ್‌ ಹಾಕಿಸಿಕೊಳ್ಳಿ ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ” ಎಂದು ಕರೆ ನೀಡಿದ್ದಾರೆ.

“ಕೆಲವು ವ್ಯಕ್ತಿಗಳು ಕೋವಿಡ್‌ ಲಸಿಕೆಯ ಕುರಿತಾದಂತೆ ವದಂತಿಗಳನ್ನು ಹಬ್ಬುತ್ತಿದ್ದಾರೆ. ಈ ವದಂತಿಗಳಿಗೆ ಹಲವು ಮುಸಿಮರು ಬಲಿ ಬೀಳುತ್ತಿದ್ದಾರೆ” ಎಂದು ಅವರು ಹೇಳಿದರು.

ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24

“ವಿಜ್ಞಾನಿಗಳು ಮುಸ್ಲಿಮರಿಗೆ ಬೇರೆ, ಮುಸ್ಲಿಮೇತರರಿಗೆ ಬೇರೆ ಎಂಬಂತೆ ಲಸಿಕೆಗಳನ್ನು ತಯಾರಿಸಲಿಲ್ಲ. ಮುಸ್ಲಿಮರು ಲಸಿಕೆ ಹಾಕಿಸಿಕೊಳ್ಳದೆ ಇರಲಿ ಎಂಬ ಕಾರಣದಿಂದ ಯಾರೋ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ನಮ್ಮದೇ ಸಮುದಾಯದ ಹಲವು ಮಂದಿ ಈ ಕುರಿತಾದಂತೆ ವದಂತಿಗಳನ್ನು ಹಬ್ಬಿಸಿ ಜನರನ್ನು ಭಯಭೀತರನ್ನಾಗಿಸುತ್ತಿದ್ದಾರೆ” ಎಂದು ಅವರು ಹೇಳಿದರು.

“ತಜ್ಞರ ಪ್ರಕಾರ, ಯಾರೆಲ್ಲಾ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದಾರೆಯೋ, ಅವರಲ್ಲಿ ಬಹುತೇಕರಿಗೆ ಕೋವಿಡ್‌ ಸೋಂಕು ಉಂಟಾಗಿಲ್ಲ. ಒಂದು ವೇಳೆ ಲಸಿಕೆ ಪಡೆದ ಬಳಿಕವೂ ಸೋಂಕು ಕಂಡು ಬಂದರೆ ಅದು ತೀವ್ರ ಪ್ರಮಾಣದಲ್ಲಿರುವುದಿಲ್ಲ ಮತ್ತು ಆಸ್ಪತ್ರೆಗೆ ದಾಖಲಾಗುವಂತಹ ಪರಿಸ್ಥಿತಿ ಎದುರಾಗುವುದಿಲ್ಲ. ಲಸಿಕೆ ಪಡೆದುಕೊಳ್ಳುವುದು ಸದ್ಯದ ಪರಿಸ್ಥಿತಿಯಲ್ಲಿ ಜೀವ ಉಳಿಸುವುದಕ್ಕಿರುವ ಮಾರ್ಗ” ಎಂದು ವೈದ್ಯರು ಹೇಳಿಕೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.

ಕೋವಿಡ್ ಸಂಕಷ್ಟ : ಭಾರತಕ್ಕೆ ಸಹಾಯಕ್ಕೆ ಧಾವಿಸಿದ ಅಮೆರಿಕ, ಇಂಗ್ಲೆಂಡ್ -Vishwanews24

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

10 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago