Featured

ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ : ಬಿ.ವೈ.ವಿಜಯೇಂದ್ರ – vishwanews24

ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ ರೂ. 1,90,000 ಕೋಟಿ ಸಾಲ ಮಾಡಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ ನೋಂದಣಿ ಶುಲ್ಕವು ಶೇ.600ರಷ್ಟು ಹೆಚ್ಚಳವಾಗಿದೆ. ಆಸ್ತಿ ಗೈಡೆನ್ಸ್ ಮೌಲ್ಯವೂ ಶೇ.30ರಷ್ಟು ಏರಿಕೆ ಕಂಡಿದೆ. ವಾಹನಗಳ ನೋಂದಣಿ ದರವು ಶೇ.10ರಷ್ಟು ಜಾಸ್ತಿ ಆದರೆ, ಆಸ್ಪತ್ರೆಗಳ ಸೇವಾ ಶುಲ್ಕ ಶೇ.5ರಷ್ಟು ಏರಿದೆ. ವಿದ್ಯುತ್ ದರವು ಶೇ.14.5ರಷ್ಟು ಜಾಸ್ತಿಯಾಗಿದೆ. ನೀರಿನ ದರವು ಶೇ 30 ಏರಿದೆ. ಹಾಲಿನ ದರ ಶೇ 15ರಷ್ಟು ಹೆಚ್ಚಾಗಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ ರೂ. 1,90,000 ಕೋಟಿ ಸಾಲ ಮಾಡಿದೆ ಎಂಬುದನ್ನು ನಾಡಿನ ಜನರು ಗಮನಿಸಬೇಕಿದೆ. ವಿವಿಧ ಸರಕಾರಿ ಇಲಾಖೆಗಳ ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದರ ವಸೂಲಿ ಕುರಿತು ಸಂಬಂಧಿತ ಸಚಿವರ ಜೊತೆ ಚರ್ಚಿಸಿದ್ದಾಗಿ ಇಂಧನ ಸಚಿವ ಜಾರ್ಜ್ ಅವರೇ ಹೇಳಿದ್ದಾರೆ. ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ ದಾರುಣ ಸ್ಥಿತಿಗೆ ರಾಜ್ಯ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಸ್ಸಿನ ಪ್ರಯಾಣದರವೂ ಶೇ.15 ರಷ್ಟು ಹೆಚ್ಚಾಗಿದೆ. ಮೆಟ್ರೊ ಪ್ರಯಾಣ ದರ ಗರಿಷ್ಠ ಏರಿಕೆ ಒಂದು ದುಸ್ಸಾಹಸ. ರಾಜ್ಯ ಸರಕಾರದ ಒತ್ತಾಯದ ಮೇರೆಗೆ ಮೆಟ್ರೊ ಪ್ರಯಾಣ ದರ ಗರಿಷ್ಠ ಮಟ್ಟಕ್ಕೆ ಏರಿಸಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಅವರು ದೂರಿದರು. ಚೆನ್ನೈ, ಲಕ್ನೋ, ಮುಂಬೈ, ಕೋಲ್ಕತ್ತ, ದೆಹಲಿಯಲ್ಲಿ ಮೆಟ್ರೋ ದರ ಏರಿಕೆ ಆಗಿಲ್ಲ. ರಾಜ್ಯ ಸರಕಾರದ ಆಗ್ರಹದಿಂದ ಇಲ್ಲಿ ಹೀಗಾಗಿದೆ ಎಂದು ಗಮನಕ್ಕೆ ತಂದರು.

ಸರಕಾರವು ಗ್ಯಾರಂಟಿಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ.ಇದರಿಂದ ಬೆಂಗಳೂರಿನ ಜನತೆ ಅತಿ ಹೆಚ್ಚು ಆಸ್ತಿ ತೆರಿಗೆ ಕಟ್ಟುತ್ತಿದ್ದಾರೆ. ವಾಹನ, ನೀರಿನ ದರ ಹೆಚ್ಚು ಪಾವತಿಸುತ್ತಿದ್ದಾರೆ. ಆದಾಯ ತೆರಿಗೆಯನ್ನೂ ಹೆಚ್ಚು ಕಟ್ಟುತ್ತಿದ್ದಾರೆ . ಮೆಟ್ರೊ ದರ ಏರಿಕೆ ವಿಚಾರದಲ್ಲೂ ಕಾಂಗ್ರೆಸ್ ಪಕ್ಷ ಕೇಂದ್ರದತ್ತ ಬೊಟ್ಟು ಮಾಡುವ ಚಾಳಿ ಮುಂದುವರೆಸಿದೆ ಎಂದು ದೂರಿದರು.

ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ. ಇನ್ನೊಂದೆಡೆ ಗೃಹಲಕ್ಷ್ಮಿ ಯೋಜನೆ 2 ಸಾವಿರ ರೂ. ಐದಾರು ತಿಂಗಳಿಂದ ಸಿಗುತ್ತಿಲ್ಲ. 5 ಕೆಜಿ ಅಕ್ಕಿಯ ಹಣವನ್ನೂ ಕೊಡುತ್ತಿಲ್ಲ. ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 7ರಂದು 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿ ಅಥವಾ ದಾಖಲೆಯನ್ನು ಸಿದ್ದರಾಮಯ್ಯನವರು ನಿರ್ಮಾಣ ಮಾಡಲಿದ್ದಾರೆ ಎಂದರು.

ಸಂಸದ ಪಿ.ಸಿ. ಮೋಹನ್, ಮಾಜಿ ಸಚಿವರಾದ ಗೋಪಾಲಯ್ಯ, ಶಾಸಕ ಉದಯ ಗರುಡಾಚಾರ್, ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago