Featured

ಎಲ್ಲ ರೀತಿಯ ಧಾರ್ಮಿಕ ಆಚರಣೆಗಳು ಮಂದಿರ ಮತ್ತು ಮಸೀದಿಗಳ ಒಳಗಿರಲಿ, ರಸ್ತೆಯಲ್ಲಿ ಬೇಡ : ಅಲಿಗಢ ಜಿಲ್ಲಾಡಳಿತ -Vishwanews24

ಲಖನೌ: ರಸ್ತೆಗಳಲ್ಲಿ ನಮಾಜ್, ಹನುಮಾನ್‌ ಚಾಲಿಸಾ ಪಠನ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಅಲಿಗಢ ಜಿಲ್ಲಾಡಳಿತ ಖಡಕ್‌ ಕ್ರಮಕ್ಕೆ ಮುಂದಾಗಿದೆ.

ಮುಸ್ಲಿಂ ಸಮುದಾಯದವರು ಶುಕ್ರವಾರಗಳಂದು ನಮಾಜ್‌ ಮಾಡುವ ವೇಳೆ ರಸ್ತೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಕೆಲವು ಸಂಘಟನೆಗಳು ಮಂಗಳವಾರದಂದು ಹನುಮಾನ್‌ ಚಾಲಿಸಾ ಪಠನೆ ಹಾಗೂ ಆರತಿಯನ್ನು ಕೂಡ ರಸ್ತೆಗಳಲ್ಲಿ ಮಾಡಲು ಆರಂಭಿಸಿ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆ ನೀಡುತ್ತಿವೆ ಎಂದು ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಜಿಲ್ಲಾಡಳಿತ ವರದಿ ನೀಡಿ ಕ್ರಮಕ್ಕೆ ಮನವಿ ಮಾಡಿತ್ತು.

ಎರಡು ಸಮುದಾಯಗಳ ಸಂಘಟನೆಗಳನ್ನು ಕರೆಸಿ ಸಭೆ ನಡೆಸಿದ ಮ್ಯಾಜಿಸ್ಪ್ರೇಟ್‌ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ಮಂದಿರ ಮತ್ತು ಮಸೀದಿಗಳ ಒಳಗೆ ಮಾತ್ರ ನಿಗದಿಪಡಿಸಿ. ರಸ್ತೆಗಳಿಗೆ ಅದನ್ನು ತರಬೇಡಿ. ಜನಸಾಮಾನ್ಯರ ಸಂಚಾರಕ್ಕೆ ಅಡ್ಡಿಯಾಗುವುದು ಬೇಡ ಎಂದು ನಿರ್ದೇಶನ ನೀಡಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳಿಂದ ಜನಸಾಮಾನ್ಯರಿಗೆ ಅನನುಕೂಲವಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಡಳಿತ ಧಾರ್ಮಿಕ ಮುಖಂಡರಿಗೆ ಖಡಕ್‌ ಆದೇಶ ನೀಡಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago