ಲಖನೌ: ರಸ್ತೆಗಳಲ್ಲಿ ನಮಾಜ್, ಹನುಮಾನ್ ಚಾಲಿಸಾ ಪಠನ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಅಲಿಗಢ ಜಿಲ್ಲಾಡಳಿತ ಖಡಕ್ ಕ್ರಮಕ್ಕೆ ಮುಂದಾಗಿದೆ.
ಮುಸ್ಲಿಂ ಸಮುದಾಯದವರು ಶುಕ್ರವಾರಗಳಂದು ನಮಾಜ್ ಮಾಡುವ ವೇಳೆ ರಸ್ತೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಕೆಲವು ಸಂಘಟನೆಗಳು ಮಂಗಳವಾರದಂದು ಹನುಮಾನ್ ಚಾಲಿಸಾ ಪಠನೆ ಹಾಗೂ ಆರತಿಯನ್ನು ಕೂಡ ರಸ್ತೆಗಳಲ್ಲಿ ಮಾಡಲು ಆರಂಭಿಸಿ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆ ನೀಡುತ್ತಿವೆ ಎಂದು ಜಿಲ್ಲಾ ಮ್ಯಾಜಿಸ್ಪ್ರೇಟ್‌ಗೆ ಜಿಲ್ಲಾಡಳಿತ ವರದಿ ನೀಡಿ ಕ್ರಮಕ್ಕೆ ಮನವಿ ಮಾಡಿತ್ತು.
ಎರಡು ಸಮುದಾಯಗಳ ಸಂಘಟನೆಗಳನ್ನು ಕರೆಸಿ ಸಭೆ ನಡೆಸಿದ ಮ್ಯಾಜಿಸ್ಪ್ರೇಟ್ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ಮಂದಿರ ಮತ್ತು ಮಸೀದಿಗಳ ಒಳಗೆ ಮಾತ್ರ ನಿಗದಿಪಡಿಸಿ. ರಸ್ತೆಗಳಿಗೆ ಅದನ್ನು ತರಬೇಡಿ. ಜನಸಾಮಾನ್ಯರ ಸಂಚಾರಕ್ಕೆ ಅಡ್ಡಿಯಾಗುವುದು ಬೇಡ ಎಂದು ನಿರ್ದೇಶನ ನೀಡಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳಿಂದ ಜನಸಾಮಾನ್ಯರಿಗೆ ಅನನುಕೂಲವಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಡಳಿತ ಧಾರ್ಮಿಕ ಮುಖಂಡರಿಗೆ ಖಡಕ್ ಆದೇಶ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…