ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಅವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.
ಕಲಬುರಗಿಗೆ ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…