Featured

ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ : ಪ್ರಿಯಾಂಕ್ ಖರ್ಗೆ – vishwanews24

ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ಕಲಬುರಗಿಗೆ ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago