Featured

ಎಸೆಸೆಲ್ಸಿ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಎಲ್ಲರೂ ಉತ್ತೀರ್ಣ, ಮರುಮೌಲ್ಯಮಾಪನ ಇಲ್ಲ -Vishwanews24

ಎಸೆಸೆಲ್ಸಿ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಎಲ್ಲರೂ ಉತ್ತೀರ್ಣ, ಮರುಮೌಲ್ಯಮಾಪನ ಇಲ್ಲ -Vishwanews24

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ ಸಂಬಂಧಿಸಿ ಅಧಿಕೃತ ಅಧಿಸೂಚನೆ ಹೊರಡಿಸಿರುವ ಸರಕಾರ, ಕನಿಷ್ಠ ಅಂಕ ನೀಡಿ ಎಲ್ಲರನ್ನು ಉತ್ತೀರ್ಣಗೊಳಿಸಲು ಸೂಚಿಸಿದ್ದು, ಮರು ಮೌಲ್ಯಮಾಪನ ಇರುವುದಿಲ್ಲ ಎಂದು ಖಚಿತಪಡಿಸಿದೆ. ಪರೀಕ್ಷೆಯ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

2020-21ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಕನಿಷ್ಠ ಉತ್ತೀರ್ಣತೆಯ ಅಂಕ ನೀಡಿ, ವಿದ್ಯಾರ್ಥಿಗಳು ಗಳಿಸುವ ಅಂಕದ ಆಧಾರದಲ್ಲಿ ಶ್ರೇಣಿ ನೀಡಲು ಸೂಚಿಸಲಾಗಿದೆ.

90ರಿಂದ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಎ , 80ರಿಂದ 89 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಎ, 60ರಿಂದ 79 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಬಿ ಮತ್ತು 35ರಿಂದ 59 ಅಂಕ ಪಡೆ ಯುವ ವಿದ್ಯಾರ್ಥಿಗಳಿಗೆ ಸಿ ಶ್ರೇಣಿ ನೀಡಲು ತಿಳಿಸಿದೆ. ಪ್ರತೀ ವಿಷಯದ ಪರೀ ಕ್ಷೆ 40 ಅಂಕಗಳಿಗೆ ನಡೆಯಲಿದ್ದು, ಅವುಗಳನ್ನು 80 ಅಂಕಗಳಿಗೆ ಪರಿವರ್ತಿಸಬೇಕು (ಪ್ರಥಮ ಭಾಷೆ 125 ಅಂಕ), ಒಟ್ಟು 625 ಅಂಕಕ್ಕೆ ಅನುಗುಣವಾಗಿ ಫಲಿತಾಂಶ ನೀಡಲು ಸೂಚಿಸಿದೆ.

ಇದು 2020-21ನೇ ಸಾಲಿಗೆ ಸೀಮಿತವಾಗಿ ಇರಲಿದೆ. ಜತೆಗೆ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಸಂಬಂಧಿಸಿ ಛಾಯಾಪ್ರತಿ, ಅಂಕಗಳ ಮರು ಎಣಿಕೆ, ಮರು ಮೌಲ್ಯಮಾಪನ ಇರುವುದಿಲ್ಲ. ಕೊರೊನಾ ಕಾರಣಕ್ಕೆ ಅನಾರೋಗ್ಯದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರಥಮ ಅವಕಾಶ ಎಂದು ಮರು ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತದೆ. ಎಲ್ಲವೂ ಬಹು ಆಯ್ಕೆಯ ಪ್ರಶ್ನೆಗಳು ಆಗಿರಲಿದ್ದು, 8.77 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago