ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ ಸಂಬಂಧಿಸಿ ಅಧಿಕೃತ ಅಧಿಸೂಚನೆ ಹೊರಡಿಸಿರುವ ಸರಕಾರ, ಕನಿಷ್ಠ ಅಂಕ ನೀಡಿ ಎಲ್ಲರನ್ನು ಉತ್ತೀರ್ಣಗೊಳಿಸಲು ಸೂಚಿಸಿದ್ದು, ಮರು ಮೌಲ್ಯಮಾಪನ ಇರುವುದಿಲ್ಲ ಎಂದು ಖಚಿತಪಡಿಸಿದೆ. ಪರೀಕ್ಷೆಯ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.
2020-21ನೇ ಸಾಲಿನ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಕನಿಷ್ಠ ಉತ್ತೀರ್ಣತೆಯ ಅಂಕ ನೀಡಿ, ವಿದ್ಯಾರ್ಥಿಗಳು ಗಳಿಸುವ ಅಂಕದ ಆಧಾರದಲ್ಲಿ ಶ್ರೇಣಿ ನೀಡಲು ಸೂಚಿಸಲಾಗಿದೆ.
90ರಿಂದ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಎ , 80ರಿಂದ 89 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಎ, 60ರಿಂದ 79 ಅಂಕ ಪಡೆಯುವ ವಿದ್ಯಾರ್ಥಿ ಗಳಿಗೆ ಬಿ ಮತ್ತು 35ರಿಂದ 59 ಅಂಕ ಪಡೆ ಯುವ ವಿದ್ಯಾರ್ಥಿಗಳಿಗೆ ಸಿ ಶ್ರೇಣಿ ನೀಡಲು ತಿಳಿಸಿದೆ. ಪ್ರತೀ ವಿಷಯದ ಪರೀ ಕ್ಷೆ 40 ಅಂಕಗಳಿಗೆ ನಡೆಯಲಿದ್ದು, ಅವುಗಳನ್ನು 80 ಅಂಕಗಳಿಗೆ ಪರಿವರ್ತಿಸಬೇಕು (ಪ್ರಥಮ ಭಾಷೆ 125 ಅಂಕ), ಒಟ್ಟು 625 ಅಂಕಕ್ಕೆ ಅನುಗುಣವಾಗಿ ಫಲಿತಾಂಶ ನೀಡಲು ಸೂಚಿಸಿದೆ.
ಇದು 2020-21ನೇ ಸಾಲಿಗೆ ಸೀಮಿತವಾಗಿ ಇರಲಿದೆ. ಜತೆಗೆ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ಸಂಬಂಧಿಸಿ ಛಾಯಾಪ್ರತಿ, ಅಂಕಗಳ ಮರು ಎಣಿಕೆ, ಮರು ಮೌಲ್ಯಮಾಪನ ಇರುವುದಿಲ್ಲ. ಕೊರೊನಾ ಕಾರಣಕ್ಕೆ ಅನಾರೋಗ್ಯದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರಥಮ ಅವಕಾಶ ಎಂದು ಮರು ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತದೆ. ಎಲ್ಲವೂ ಬಹು ಆಯ್ಕೆಯ ಪ್ರಶ್ನೆಗಳು ಆಗಿರಲಿದ್ದು, 8.77 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…