Featured

ಎಸೆಸೆಲ್ಸಿ ಪರೀಕ್ಷೆ  : ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆ ಪ್ರಕಟ -Vishwanews24

ಎಸೆಸೆಲ್ಸಿ ಪರೀಕ್ಷೆ  : ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆ ಪ್ರಕಟ -Vishwanews24

ಬೆಂಗಳೂರು : ಕೊರೊನಾ ಸಂಕಷ್ಟದ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಜುಲೈ 2021ರ ಎಸೆಸೆಲ್ಸಿಪರೀಕ್ಷೆಗೆ ಸಂಬಂಧಿಸಿದ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆಗಳನ್ನು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.ಉದ್ಯೋಗ ನೇಮಕಾತಿಗೆ ನಡೆಸುವ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಪರೀಕ್ಷೆಯನ್ನು ಈ ಬಾರಿ ನಡೆಸಲಾಗುತ್ತಿದೆ.

ಜೂನ್ 2021ರಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಿ ಕೊವೀಡ್ ಕಾರಣದಿಂದ ಮತ್ತಷ್ಟು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ( Multiple Choice Question Based ) ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.

ಅದರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳನ್ನು ಶೇಡ್ ಮಾಡುವ ಓಎಂಆರ್ ಗಳ ಮಾದರಿಯನ್ನು ಮಂಡಳಿಯ http://sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.

ಈ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಸದರಿ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಗಳ ಮಾದರಿಯನ್ನು ಡೌನ್ ಲೋಡ್ ಮಾಡಿಕೊಂಡು, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುವಾಗುವಂತೆ ಕ್ರಮವಹಿಸಲು ಸೂಚಿಸಿದೆ. ಉಳಿದಂತೆ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂಬುದಾಗಿ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago