ಬೆಂಗಳೂರು : ಕೊರೊನಾ ಸಂಕಷ್ಟದ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಜುಲೈ 2021ರ ಎಸೆಸೆಲ್ಸಿಪರೀಕ್ಷೆಗೆ ಸಂಬಂಧಿಸಿದ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆಪತ್ರಿಕೆಗಳನ್ನು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.ಉದ್ಯೋಗ ನೇಮಕಾತಿಗೆ ನಡೆಸುವ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಪರೀಕ್ಷೆಯನ್ನು ಈ ಬಾರಿ ನಡೆಸಲಾಗುತ್ತಿದೆ.
ಜೂನ್ 2021ರಲ್ಲಿ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಿ ಕೊವೀಡ್ ಕಾರಣದಿಂದ ಮತ್ತಷ್ಟು ಸರಳೀಕರಿಸಿ ಎರಡು ದಿನಗಳಿಗೆ ಪರೀಕ್ಷೆಯನ್ನು ಸೀಮಿತಗೊಳಿಸಿ, ಬಹು ಆಯ್ಕೆ ಪ್ರಶ್ನೆ ( Multiple Choice Question Based ) ಮಾದರಿಯಲ್ಲಿ ವಿಷಯವಾರು ಗರಿಷ್ಠ 40 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.
ಅದರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಬಹು ಆಯ್ಕೆ ಪ್ರಶ್ನೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳನ್ನು ಶೇಡ್ ಮಾಡುವ ಓಎಂಆರ್ ಗಳ ಮಾದರಿಯನ್ನು ಮಂಡಳಿಯ http://sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಸದರಿ ಮಾದರಿ ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಗಳ ಮಾದರಿಯನ್ನು ಡೌನ್ ಲೋಡ್ ಮಾಡಿಕೊಂಡು, ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುವಾಗುವಂತೆ ಕ್ರಮವಹಿಸಲು ಸೂಚಿಸಿದೆ. ಉಳಿದಂತೆ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂಬುದಾಗಿ ತಿಳಿಸಿದೆ.
ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…
ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…
ಎಂಆರ್‌ಪಿಎಲ್ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…