Featured

ಎಸೆಸೆಲ್ಸಿ ಪರೀಕ್ಷೆ : ‘ಶುಲ್ಕ ಪಾವತಿಸದಿದ್ರೂ ಹಾಲ್ ಟಿಕೆಟ್ ಕೊಡಲೇಬೇಕು’ :  ಸುರೇಶ್ ಕುಮಾರ್ -Vishwanews24

ಎಸೆಸೆಲ್ಸಿ ಪರೀಕ್ಷೆ : ‘ಶುಲ್ಕ ಪಾವತಿಸದಿದ್ರೂ ಹಾಲ್ ಟಿಕೆಟ್ ಕೊಡಲೇಬೇಕು’ :  ಸುರೇಶ್ ಕುಮಾರ್ -Vishwanews24

ಬೆಂಗಳೂರು : ಜುಲೈ19 ಮತ್ತು 22 ರಂದು ಎಸೆಸೆಲ್ಸಿ ಪರೀಕ್ಷೆ ನಿಗದಿಯಾಗಿದ್ದು, ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಹಾಜರಾಗಲು ಯಾವುದೇ ವಿದ್ಯಾರ್ಥಿಗೆ ಪ್ರವೇಶ ಪತ್ರ ಅಥವಾ ಹಾಲ್​ ಟಿಕೆಟ್ ​ ನಿರಾಕರಿಸಬಾರದೆಂದು ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್​.ಸುರೇಶ್​ ಕುಮಾರ್​ ಬುಧವಾರ ಹೇಳಿದ್ದಾರೆ.

ಎಸೆಸೆಲ್ಸಿ ಸಚಿವ ಸುರೇಶ್ ಕುಮಾರ್ ಅವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿ , “ವಿದ್ಯಾರ್ಥಿಗಳು ಹಾಲ್ ಟಿಕೆಟ್​ ಪಡೆಯಲು ಸಮಸ್ಯೆ ಉಂಟಾಗುತ್ತಿರುವ ಬಗ್ಗೆ ನಮಗೆ ವರದಿಯಾಗಿಲ್ಲ. ಆದರೆ ಪೂರ್ಣ ಶುಲ್ಕ ಪಾವತಿಸದಿದ್ದರೆ ಹಾಲ್‌ ಟಿಕೆಟ್‌ ನೀಡಲಾಗುತ್ತಿಲ್ಲ ಎಂಬ ವರದಿ ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಗಳಿಗೆ ನೊಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​ ನೀಡುವಂತೆ ಬಿಇಒ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಶುಲ್ಕ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಯಾವುದೇ ವಿದ್ಯಾರ್ಥಿಗೆ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನಿರಾಕರಿಸಲಾಗುವುದಿಲ್ಲ ಎಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಅದಾಗ್ಯೂ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಪಡೆಯಲು ತೊಂದರೆ ಕಂಡುಬಂದರೆ ಪೋಷಕರು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯನ್ನು ಸಂಪರ್ಕಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಪರೀಕ್ಷೆ ಕುರಿತು ಮಾತನಾಡಿ ಶೇ 100ರಷ್ಟು ಪರೀಕ್ಷಾ ಸಿಬ್ಬಂದಿ ವಾಕ್ಸಿನ್ ಪಡೆದಿದ್ದಾರೆ. ಪರೀಕ್ಷೆಗೆ ಮೊದಲು ಮತ್ತು ಬಳಿಕ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆದೇಶಿಸಲಾಗಿದೆ . ಪರೀಕ್ಷೆಗೆ ಎರಡು ದಿನಗಳ ಮೊದಲು ಈ ಪ್ರಕ್ರಿಯೆಗೆ ನೇಮಕಗೊಂಡಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ತಯಾರಿ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

8 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

14 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

14 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

15 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

17 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

17 hours ago