ಉಡುಪಿ

ಎಸೆಸೆಲ್ಸಿ ಫಲಿತಾಂಶ: ಉಡುಪಿಗೆ ಮತ್ತೆ ಅಗ್ರಸ್ಥಾನ,

ಕಳೆದ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿಯೂ ಆ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕುಂಜಿಬೆಟ್ಟು ಟಿ.ಎ. ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಮೇಧಾ ಭಟ್ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಮತ್ತು ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಮನೋಜ್ ಮಲ್ಯ 623 ಅಂಕ ಪಡೆದು ರಾಜ್ಯದಲ್ಲಿ ತೃತೀಯ ಸ್ಥಾನಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯನ್ನು ಕಳೆದ ಬಾರಿಯಂತೆ ಈ ಬಾರಿಯು ಪ್ರಥಮ ಸ್ಥಾನ ಕಾಯ್ದುಕೊಳ್ಳಲು ಹಲವು ಯೋಜನೆಗಳನ್ನು ರೂಪಿಸಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ ಕಾರಿಂಜ ತಿಳಿಸಿದ್ದಾರೆ.
ಪ್ರತಿ ತಿಂಗಳು ಮುಖ್ಯ ಶಿಕ್ಷಕರಿಗೆ ಶೈಕ್ಷಣಿಕ ಸಮಾಲೋಚನೆ ಸಭೆ ನಡೆಸುವುದು, ಪೂರ್ವಬಾವಿ ಪರೀಕ್ಷೆಗಳನ್ನು ಬರೆಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರಿಹಾರಾತ್ಮಕ ಕ್ರಮ ಕೈಗೊಳ್ಳಲಾಗುತ್ತಿತ್ತು. ನಾನು ಸೇರಿದಂತೆ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಶಾಲೆಗಳಿಗೆ ನಿರಂತರ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುವುದು, ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸನಿವಾಸ ವಿಶೇಷ ವಸತಿ ಶಿಬಿರ, ಪರೀಕ್ಷೆ ಬಗ್ಗೆ ಪೂರ್ವ ತಯಾರಿ ಕಳೆದ ಆರು ತಿಂಗಳಿನಿಂದಲೇ ಮಾಡಿಕೊಂಡಿದ್ದವು. ಮಕ್ಕಳನ್ನು ಪರೀಕ್ಷೆಗೆ ತಯಾರಿ ಮಾಡುವ ಬಗ್ಗೆ ವಿಷಯವಾರು ಶಿಕ್ಷಕರಿಗೆ ವ್ಯವಸ್ಥಿತ ತರಬೇತಿ ನೀಡಲಾಗಿತ್ತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಲಿಕೆಗಾಗಿ ಹೆಚ್ಚಿನ ಮುತುವರ್ಜಿ ವಹಿಸಲಾಗಿತ್ತು ಎಂದು ಮಾಹಿತಿ ನೀಡಿದರು.ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಕಾಯ್ದುಕೊಳ್ಳುವಲ್ಲಿ ಇಲಾಖೆ ಸಾಕಷ್ಟು ಮುತುವರ್ಜಿ ವಹಿಸಿದೆ. ಶಿಕ್ಷಕರೂ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಫಲಿತಾಂಶದಲ್ಲಿ ಪ್ರತಿಫಲನಗೊಂಡಿದೆ. ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ.

ಶೇಕಡಾವಾರು ಏರಿಕೆ: ಕಳೆದ ವರ್ಷ ಶೇ.84.24 ಫಲಿತಾಂಶ ಪಡೆದಿದ್ದ ಜಿಲ್ಲೆ ಈ ಬಾರಿ ಶೇ.3.94 ಏರಿಕೆಯೊಂದಿಗೆ ಶೇ.88.18 ತಲುಪಿ ವಿಶೇಷ ಸಾಧನೆ ಮಾಡಿದೆ. 6,495 ಗಂಡುಮಕ್ಕಳು, 6490 ಹೆಣ್ಮಕ್ಕಳ ಸಹಿತ ಒಟ್ಟು 12,985 ಮಂದಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 5537 ಗಂಡುಮಕ್ಕಳು, 5,913 ಹೆಣ್ಣುಮಕ್ಕಳ ಸಹಿತ ಒಟ್ಟು 11,450 ಮಂದಿ ಉತ್ತೀರ್ಣರಾಗಿದ್ದಾರೆ.
ಜಿಲ್ಲೆಯಲ್ಲಿ ಎಂದಿನಂತೆ ಈ ಬಾರಿಯೂ ಹೆಣ್ಮಕ್ಕಳೇ ಮುಂದು. ನಗರ ಭಾಗದ 2,806 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2,586 ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ 10,379 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 9,056 ಮಂದಿ ತೇರ್ಗಡೆಯಾಗಿದ್ದಾರೆ. ಕನ್ನಡ ಮಾಧ್ಯಮದ 7098 ವಿದ್ಯಾರ್ಥಿಗಳಲ್ಲಿ, 5810 ವಿದ್ಯಾರ್ಥಿಗಳು ಉತ್ತೀರ್ಣರಾದರೆ, ಆಂಗ್ಲಮಾಧ್ಯಮದ 6,087 ವಿದ್ಯಾರ್ಥಿಗಳಲ್ಲಿ 5,832 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅಂಗವಿಕಲರು, ಬುದ್ಧಿಮಾಂದ್ಯರು ಸೇರಿದಂತೆ ಒಟ್ಟು 27 ಮಂದಿ ಪರೀಕ್ಷೆ ಬರೆದಿದ್ದು, 19 ಮಂದಿ ಉತ್ತೀರ್ಣರಾಗಿದ್ದಾರೆ.
ಒಟ್ಟು ವಿದ್ಯಾರ್ಥಿಗಳಲ್ಲಿ ಎ ಪ್ಲಸ್ (ಶೇ.90-100) 1086, ಎ (ಶೇ.80-90) 2716, ಬಿ ಪ್ಲಸ್ (ಶೇ.70-80) 3282, ಬಿ (ಶೇ.60-70) 2844, ಸಿ ಪ್ಲಸ್ (ಶೇ.50-60) 1529, ಸಿ (ಶೇ.35-50) 185 ಮಂದಿ ಉತ್ತೀರ್ಣರಾಗಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

13 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago