ಬೆಂಗಳೂರು,: ಎಸ್ ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಏ. 30 ರ ಮಂಗಳವಾರ ಪ್ರಕಟಿಸಿದರು.
ಈ ಬಾರಿ 73.7ರಷ್ಟು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ .1.77ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು. ಇಬ್ಬರು ವಿದ್ಯಾರ್ಥಿನಿಯರು 625ರಲ್ಲಿ 625 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಮಾ.21ರಿಂದ ಎ.4ರ ವರೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಗೆ 8.41 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಎಲ್ಲ ಪರೀಕ್ಷೆಗಳಲ್ಲೂ ಸರಾಸರಿ 25 ಸಾವಿರ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಫಲಿತಾಂಶದಲ್ಲಿ ಹಾಸನ ಪ್ರಥಮ, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ತೃತೀಯಾ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಉಡುಪಿ 5 ನೇ ಸ್ಥಾನ, ಚಿಕ್ಕೋಡಿ 6 ನೇ ಸ್ಥಾನ ಪಡೆದಿದೆ. ಪಡೆದುಕೊಂಡಿದೆ. ಇನ್ನು ಫಲಿತಾಂಶದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಶೇ. 76.67 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕುಮುಟದ ನಾಗಾಂಜಲಿ ಮತ್ತು ಅನೇಕಲ್ ನ ಸೃಜನಾ.ಡಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…