ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವ ಮತ್ತು ಸಿಬಿಎಸ್‌ಇ ಹಾಗೂ ನೆರೆ ರಾಜ್ಯಗಳ ಏಕರೂಪ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸುವ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ.
ಎಸ್‌ಎಸ್‌ಎಲ್‌ಸಿ (SSLC): ಪ್ರಸ್ತುತ 625 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು. ಹೊಸ ನಿಯಮದ ಪ್ರಕಾರ, 625 ಅಂಕಗಳಿಗೆ ಕನಿಷ್ಟ 206 ಅಂಕ (ಶೇ. 33) ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಪ್ರತಿ ವಿಷಯದಲ್ಲಿ ಕಡ್ಡಾಯವಾಗಿ ಕನಿಷ್ಠ 30 ಅಂಕ ಪಡೆಯಲೇಬೇಕು.
ದ್ವಿತೀಯ ಪಿಯುಸಿ (II PUC): 600 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ ನಿಯಮದಂತೆ, 600 ಅಂಕಗಳಿಗೆ ಕನಿಷ್ಟ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ.
2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…