ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 94% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದ ಅವರು, “ಕರಾವಳಿ ಜಿಲ್ಲೆಯಾದ ಉಡುಪಿ ಶೈಕ್ಷಣಿಕವಾಗಿ ಯಾವಾಗಲೂ ಮುಂಚೂಣಿಯಲ್ಲಿರುವ ಜಿಲ್ಲೆ. ಕೇವಲ ಜಿಲ್ಲೆಯವರಷ್ಟೇ ಅಲ್ಲದೆ, ಹೊರ ಜಿಲ್ಲೆಗಳ ವಿದ್ಯಾರ್ಥಿಗಳೂ ಶಿಕ್ಷಣಕ್ಕಾಗಿ ಉಡುಪಿಯನ್ನು ನೆಚ್ಚಿಕೊಂಡಿದ್ದಾರೆ. ಜಿಲ್ಲೆಯ ಈ ಸಾಧನೆ ನಿಜಕ್ಕೂ ಶ್ಲಾಘನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
“ಜಿಲ್ಲೆಯು ದ್ವಿತೀಯ ಸ್ಥಾನ ಗಳಿಸಲು ಕಾರಣರಾದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಎಲ್ಲಾ ಶಾಲೆಗಳು ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ” ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ, ಕುಂದಾಪುರದ ಶಂಕರನಾರಾಯಣದ ಮದರ್ ತೆರೇಸಾ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ, ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಕ್ಕಾಗಿ ಸಚಿವರು ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…