ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಗ್ರೇಡ್ ನೀಡುವ ಬಗ್ಗೆ ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ ಸೇರಿ ಮೂವರು ವಿದ್ಯಾರ್ಥಿಗಳು ತಕರಾರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರ ಏಕಸದಸ್ಯ ಪೀಠವು ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಸರ್ಕಾರಕ್ಕೆ ಸೂಚಿಸಿ, ಅರ್ಜಿ ಇತ್ಯರ್ಥಪಡಿಸಿದೆ.
ಇದನ್ನೂ ಓದಿ:
ಅರ್ಜಿದಾರರ ಪರ ವಕೀಲ ಆರ್.ವಿ.ನಾಯ್ಕ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು 2026ರ ಮಾ.28ರಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ ಇದಕ್ಕೂ ಮುನ್ನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮುಖ್ಯಸ್ಥರು 2024ರ ಅ.18 ಮತ್ತು 2025ರ ಅ.28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿ, ಎಸ್‌ಎಸ್‌ಎಲ್‌ಸಿ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಲಿಖಿತ ಪರೀಕ್ಷೆಯ ಮೌಲ್ಯಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆ 20 ಅಂಕ ನೀಡಬೇಕು ಎಂದು ಸೂಚಿಸಿದ್ದಾರೆ. ಆದರೆ, ಕೊನೆ ಹಂತದಲ್ಲಿ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಆಕ್ಷೇಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹಾಲಿ ಇರುವ ನಿಯಮಗಳು ಹಾಗೂ ಮಾರ್ಗಸೂಚಿಯಂತೆ 2025-2026ನೇ ಸಾಲಿನಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.
ಇದನ್ನೂ ಓದಿ:
ಬೆಂಗಳೂರು ಮೆಟ್ರೋದ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಹಸಿರು ನಿಶಾನೆ ; ಮೆಟ್ರೊದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪ್ರಯಾಣ ರಾಜ್ಯಪಾಲರಾದ ಸುಧಾ ಯಾದವ್…
ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ ಮಣಿಪಾಲ: ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು…
ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ ಮಂಗಳೂರು: ಕೊಂಚಾಡಿ ದೇರೆಬೈಲ್‌ನ ಶ್ರೀ ಕ್ಷೇತ್ರ ಮಂದಾರಬೈಲು…
ಕಾರವಾರ: ಚಮನ್ ಮೀನು ವಿಷಕಾರಿ ಅನಿಲ ದುರಂತಕ್ಕೆ ಐವರು ಮೀನುಗಾರರು ಬಲಿ; ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕಾರವಾರ : ಉತ್ತರ…
ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು: ಕೊಂಕಣ ರೈಲ್ವೆ…
ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್ ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್…