ಕೊಡಗು: ಎಸ್ಎಸ್ ಎಲ್ ಸಿ ಫಲಿತಾಂಶದ ಉತ್ತಮ ಅಂಕಗಳಿಸಿ ಪಾಸಾಗಿದ್ದ ವಿಧ್ಯಾರ್ಥಿನಿಯನ್ನು ಭೀಕರ ವಾಗಿ ರುಂಡ ಕಡಿದು ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ.
ಕೊಲೆ ಮಾಡಿದ ಆರೋಪಿಯನ್ನು ಓಂಕಾರಾಪ್ಪ ಎಂದು ಗುರುತಿಸಲಾಗಿದ್ದು, ಮೀನಾ ಮೃತ ವಿದ್ಯಾರ್ಥಿನಿ. ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಈ ನಡುವೆ ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ. ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…