Featured

ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣ: ಆರೋಪಿ ಪತ್ತೆಗೆ ತನಿಖೆ ಚುರುಕು ,ತೀವ್ರ ಶೋಧ – Vishwanews24

ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು , ತೀವ್ರ ಶೋಧ

ಕೊಡಗು: ಎಸ್ಎಸ್ ಎಲ್ ಸಿ ಫಲಿತಾಂಶದ ಉತ್ತಮ ಅಂಕಗಳಿಸಿ ಪಾಸಾಗಿದ್ದ ವಿಧ್ಯಾರ್ಥಿನಿಯನ್ನು ಭೀಕರ ವಾಗಿ ರುಂಡ ಕಡಿದು ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ.

ಕೊಲೆ ಮಾಡಿದ ಆರೋಪಿಯನ್ನು ಓಂಕಾರಾಪ್ಪ ಎಂದು ಗುರುತಿಸಲಾಗಿದ್ದು, ಮೀನಾ ಮೃತ ವಿದ್ಯಾರ್ಥಿನಿ. ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಈ ನಡುವೆ ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್​ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್​ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ. ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ‌ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ‌ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

9 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

12 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

15 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

16 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

16 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

16 hours ago