ಮೂಳೂರು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎಸ್‌ಟಿಪಿ (ಕೊಳಚೆ ನೀರು ಶುದ್ಧೀಕರಣ ಘಟಕ) ಯೋಜನೆಯನ್ನು ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ ನೀಡಲಾಗುವುದು ಎಂದು ಸಮಾಜಸೇವಕ ಬೆಳಪು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಮೂಳೂರು ಗ್ರಾಮಸ್ಥರ ವಿರೋಧದ ನಡುವೆಯೂ ಯೋಜನೆಯನ್ನು ಅಲ್ಲಿ ಜಾರಿಗೆ ತರಲು ಮುಂದಾಗಿರುವುದು ಸರಿಯಲ್ಲ. ಸಾರ್ವಜನಿಕರ ಅಭಿಪ್ರಾಯಕ್ಕೆ ಗೌರವ ನೀಡಿ, ಜನವಸತಿ ಕಡಿಮೆ ಇರುವ ಸೂಕ್ತ ಪ್ರದೇಶದಲ್ಲಿ ಎಸ್‌ಟಿಪಿ ಘಟಕ ನಿರ್ಮಾಣ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಇದನ್ನೂ ಓದಿ :
“ಗ್ರಾಮಸ್ಥರ ಆರೋಗ್ಯ, ಪರಿಸರ ಹಾಗೂ ಭವಿಷ್ಯದ ಕುಡಿಯುವ ನೀರಿನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಪುರಸಭೆ ತೀರ್ಮಾನ ಕೈಗೊಳ್ಳಬೇಕು. ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ,” ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಈ ಕುರಿತು ಸ್ಥಳೀಯ ಜನರು ಹಾಗೂ ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…