ಮಂಗಳೂರು, : ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸೆಸ್ಸೆಲ್ಸಿ ಪರೀಕ್ಷೆ ಬರೆದ 617 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇ.100 ಫಲಿತಾಂಶ ದಾಖಲಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 41 ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳಲ್ಲಿ ತುಳು ಭಾಷೆಯ ಪಠ್ಯ ಕಲಿಸಲಾಗುತ್ತಿದ್ದು ಈ ಪೈಕಿ 34 ಶಾಲೆಗಳ 617 ವಿದ್ಯಾರ್ಥಿಗಳು 10ನೇ ತರಗತಿಯ ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 585 ವಿದ್ಯಾರ್ಥಿಗಳು ಮತ್ತು ಉಡುಪಿ ಜಿಲ್ಲೆಯ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳೂ ಪಾಸಾಗಿದ್ದು 63 ವಿದ್ಯಾರ್ಥಿಗಳು ತುಳು ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.
ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡು ಬರುತ್ತದೆ. ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದೆ ಎಂದು ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ ಭಂಡಾರಿ ತಿಳಿಸಿದ್ದಾರೆ.
ಇದಕ್ಕೆ ಕಾರಣರಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು. ಎಂದು ಹೇಳಿರುವ ಅಧ್ಯಕ್ಷರು ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ತುಳು ಅಕಾಡಮಿ ಅಧ್ಯಕ್ಷ ಎಸಿ ಭಂಡಾರಿ “ಮುಂದಿನ ವರ್ಷಗಳಲ್ಲಿ ತುಳು ಪಠ್ಯ ಬೋಧನೆಗೆ ಇನ್ನಷ್ಟು ಉತ್ತೇಜನ ದೊರಕಿಸಿಕೊಡಲಾಗುತ್ತದೆ. ವಿದ್ಯಾರ್ಥಿಗಳು ತೃತೀಯ ಐಚ್ಚಿಕ ವಿಷಯವಾಗಿ ತುಳುವನ್ನು ಆಯ್ಕೆ ಮಾಡಿಕೊಳ್ಳುವ ಕಾರಣ ಹೆಚ್ಚಿನ ಅಂಕ ಪಡೆಯುತ್ತಿದ್ದಾರೆ” ಎಂದರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…