Featured

ಎಸ್ಸೆಸ್ಸೆಲ್ಸಿ :  ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದ ತೀರ್ಪು: ಸುರೇಶ್ ಕುಮಾರ್ – Vishwanews24

ಎಸ್ಸೆಸ್ಸೆಲ್ಸಿ :  ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದ ತೀರ್ಪು: ಸುರೇಶ್ ಕುಮಾರ್ – Vishwanews24

ಬೆಂಗಳೂರು: ‘ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಹೈಕೋರ್ಟ್‌ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್‌ಒಪಿ ಪಾಲನೆಗಳಂಥ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದೆ. ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿಸಿದೆ’ ಎಂದೂ ಹೇಳಿದ್ದಾರೆ.

‘ಕಳೆದ ವರ್ಷ ಕೂಡಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು’ ಎಂದೂ ಅವರು ನೆನಪಿಸಿಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago