ಬೆಂಗಳೂರು: ‘ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಹೈಕೋರ್ಟ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್‌ಒಪಿ ಪಾಲನೆಗಳಂಥ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಅವರು ತಿಳಿಸಿದ್ದಾರೆ.
‘ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದೆ. ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿಸಿದೆ’ ಎಂದೂ ಹೇಳಿದ್ದಾರೆ.
‘ಕಳೆದ ವರ್ಷ ಕೂಡಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು’ ಎಂದೂ ಅವರು ನೆನಪಿಸಿಕೊಂಡಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…