ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿದ ಇಂದಿರಾನಗರದ ಜೀವನಭೀಮಾನಗರದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ ಅವರ ಮನೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.
ಈ ಕುರಿತು ಫೇಸ್‌ಬುಕ್‌ನಲ್ಲಿ ಬರಹ ಪ್ರಕಟಿಸಿರುವ ಸಚಿವರು, ‘ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕನಾಗಿದ್ದು, ಬಡತನದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾನೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಇಂದು ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ಹೋಗಿದ್ದೆ. ಆ ಮನೆಯಲ್ಲಿ ಕುಳಿತುಕೊಳ್ಳಲೂ ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.
‘ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು’ ಎಂದೂ ಸಚಿವರು ಉಲ್ಲೇಖಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…