ಎಸ್ಸೆಸ್ಸೆಲ್ಸಿ 616 ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿ ಮನೆಗೆ ಸಚಿವ ಸುರೇಶ್‌ ಕುಮಾರ್ ಭೇಟಿ -Vishwanews24

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿದ ಇಂದಿರಾನಗರದ ಜೀವನಭೀಮಾನಗರದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ ಮಹೇಶ ಅವರ ಮನೆಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರಹ ಪ್ರಕಟಿಸಿರುವ ಸಚಿವರು, ‘ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕನಾಗಿದ್ದು, ಬಡತನದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾನೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ. ಇಂದು ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ಹೋಗಿದ್ದೆ. ಆ ಮನೆಯಲ್ಲಿ ಕುಳಿತುಕೊಳ್ಳಲೂ ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

‘ಮಹೇಶನಿಗೆ ಪಿಯುಸಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು – ಅದೇ ರೀತಿ ಹೃದಯ ತುಂಬಿ ಬಂತು’ ಎಂದೂ ಸಚಿವರು ಉಲ್ಲೇಖಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago