Featured

ಎಸ್​​​​ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯೆ ಆರೋಪಿ ಭರತ್​ಗೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ

ಮಂಗಳೂರು : ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ವರ್ಷದ ಹಿಂದೆ ಹತ್ಯೆಗೀಡಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಹತ್ಯೆ ಆರೋಪಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗೆ ಫೇಸ್ ಬುಕ್ ನಲ್ಲಿ ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ  ಜೀವ ಬೆದರಿಕೆ ಹಾಕಲಾಗಿದೆ. ಹತ್ಯೆ ಆರೋಪಿ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಸಾಮಾಜಿಕ ತಾಣಗಳಲ್ಲಿ ಪ್ರತೀಕಾರದ ಬೆದರಿಕೆ ಹಾಕಲಾಗಿದೆ.ಎಸ್.ಡಿ.ಪಿ.ಐ ಮುಖಂಡನಾಗಿದ್ದ ಅಶ್ರಫ್ ಕಲಾಯಿಯನ್ನು ಬಂಟ್ವಾಳ ತಾಲೂಕಿನ ಬೆಂಜನಪದವು ಎಂಬಲ್ಲಿ 2017 ಜೂ.21 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಜರಂಗದಳದ ಪುತ್ತೂರು ಸಹಸಂಚಾಲಕ ಭರತ್ ಕುಮ್ಡೇಲ್ ಪ್ರಮುಖ ಆರೋಪಿಯಾಗಿದ್ದ. ಘಟನೆಗೆ ಸಂಬಂಧಿಸಿ ಭರತ್ ಸೇರಿ ಹಲವರ ಬಂಧನವಾಗಿತ್ತು. ಆದ್ರೆ 16 ತಿಂಗಳು ಕಳೆದರೂ ಪ್ರಮುಖ ಆರೋಪಿ ಭರತ್ ಗೆ ಜಾಮೀನು ಲಭಿಸಿರಲಿಲ್ಲ. ಇದೀಗ ಹೈಕೋರ್ಟ್ ಆರೋಪಿಗೆ ಜಾಮೀನು ನೀಡಿದೆ.

ಮಂಗಳೂರು ಮುಸ್ಲಿಮ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ “ಅನ್ಯಾಯವಾಗಿ ಕೊಂದ ನಮ್ಮ ಸಹೋದರನ ಸಾವಿಗೆ ಅನ್ಯಾಯವಾಗಲು ಬಿಡಲಾರೆವು‌. ನಿನ್ನ ಕೌಂಟ್ ಡೌನ್ ಶುರುವಾಯಿತು. ಸದ್ಯದಲ್ಲೇ ನಿನಗೆ ಚಟ್ಟ ಕಟ್ಟಲಿದ್ದಾರೆ ನೆನಪಿರಲಿ” ಎಂದು ಬಹಿರಂಗ ‌ಕೊಲೆ ಬೆದರಿಕೆ ಹಾಕಲಾಗಿದೆ.

ಜಾಹೀರಾತುಗಳು

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago