ಮಡಿಕೇರಿ: ‘ಎಸ್‌ಡಿಪಿಐನಲ್ಲಿ ಗುರುತಿಸಿಕೊಂಡಿರುವ ಮುಸ್ಲಿಮರು ಪುಂಡ ಮುಸ್ಲಿಮರು’ ಎಂದು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದರು.
‘ನಿಜವಾದ ಮುಸ್ಲಿಮರಿಗೂ, ಎಸ್‌ಡಿಪಿಐನಲ್ಲಿ ಇರುವ ಮುಸ್ಲಿಮರಿಗೂ ಸಾಕಷ್ಟು ವ್ಯತ್ಯಾಸವಿದೆ. ನಿಜವಾದ ಮುಸ್ಲಿಮರು, ಈ ದೇಶದ ಬಗ್ಗೆ ಕಾಳಜಿ ಇಟ್ಟುಕೊಂಡು ಜನರನ್ನು ಪ್ರೀತಿಸುತ್ತಿದ್ದಾರೆ. ಆದರೆ, ಎಸ್‌ಡಿಪಿಐನಲ್ಲಿ ಇರುವ ಮುಸ್ಲಿಮರು ಸಮಾಜಘಾತುಕ ಶಕ್ತಿಗಳು’ ಎಂದು ಭಾಗಮಂಡಲದಲ್ಲಿ ಶನಿವಾರ ಹೇಳಿದರು.
‘ಮೊದಲು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಎಸ್‌ಡಿಪಿಐ ಕಾರ್ಯಕರ್ತರು, ಈಗ ಕಾಂಗ್ರೆಸ್ ಮುಖಂಡರ ಮೇಲೆಯೇ ದಾಳಿ ನಡೆಸಲು ಶುರು ಮಾಡಿದ್ದಾರೆ. ರಾಜಕೀಯ ಪಕ್ಷವಾಗಿ ಕೆಲಸ ಮಾಡುತ್ತಿರುವ ಎಸ್‌ಡಿಪಿಐ ಅನ್ನು ನಿಷೇಧ ಮಾಡುವುದಕ್ಕೆ ಕೆಲವು ಮಾನದಂಡಗಳಿವೆ. ಆ ಪ್ರಕಾರವೇ ಎಸ್‌ಡಿಪಿಐ ಅನ್ನು ನಿಷೇಧ ಮಾಡುತ್ತೇವೆ’ ಎಂದರು.
‘ಈ ಹಿಂದೆ ನಡೆದಿದ್ದ ಕೆಲವು ಹತ್ಯೆ, ದಾಳಿಯಲ್ಲೂ ಎಸ್‌ಡಿಪಿಐ, ಪಿಐಎಫ್ ಪಾತ್ರವಿರುವುದು ಸಾಬೀತಾಗಿದೆ. ಕೇಂದ್ರಕ್ಕೆ ರಾಜ್ಯದಿಂದ ಸಮರ್ಥವಾದ ವರದಿ ಹೋಗಲಿದೆ. ಬಳಿಕ ಕೇಂದ್ರವು ಕ್ರಮ ಕೈಗೊಳ್ಳಲಿದೆ’ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…