Featured

ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು : ಧೈರ್ಯವಿದ್ದರೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಲಿ : ರಾಮಲಿಂಗಾ ರೆಡ್ಡಿ -Vishwanews24

ರಾಮನಗರ : ತಾಕತ್ತಿದ್ದರೆ ಎಸ್‌ಡಿಪಿಐ ಮತ್ತು ಪಿಎಫ್ಐ ಸಂಘಟನೆ ನಿಷೇಧಿಸಿ ಎಂದು ಬಿಜೆಪಿಗೆ ಶಾಸಕ ರಾಮಲಿಂಗಾ ರೆಡ್ಡಿ ಸವಾಲೆಸೆದಿದ್ದು ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ”ಬಿಜೆಪಿಯು ಕಾಂಗ್ರೆಸ್‌ನ ಮತ ವಿಭಜನೆ ಮಾಡುವ ಷಡ್ಯಂತ್ರ ರೂಪಿಸಿದೆ. ಗಲಭೆಗಳು ಆದ ಸಂದರ್ಭದಲ್ಲಿ ಮಾತ್ರ ಎಸ್‌ಡಿಪಿಐ ನಿಷೇಧ ಮಾಡುವ ಬಗ್ಗೆ ಹೇಳುತ್ತಾರೆ. ನಿಜವಾಗಿ ಎಸ್‌ಡಿಪಿಐನ ಪೋಷಕರೇ ಬಿಜೆಪಿಯವರು. ಬರೀ ಹೇಳಿಕೆಗೆ ಮಾತ್ರ ಎಸ್‌ಡಿಪಿಐ ಹಾಗೂ ಪಿಎಫ್‌ಐ ನಿಷೇಧ ಸೀಮಿತವಾಗಿದೆ” ಎಂದು ಆರೋಪಿಸಿದ್ದಾರೆ.

”ಬಿಜೆಪಿ ಸರ್ಕಾರದಿಂದಾಗಿ ಕಾನೂನು ಸುವ್ಯವಸ್ಥೆ ದುಸ್ಥಿತಿಯಲ್ಲಿದ್ದು ಶಾಸಕರಿಗೂ ರಕ್ಷಣೆ ಇಲ್ಲದ ಸ್ಥಿತಿ ಉಂಟಾಗಿದೆ. ಕಳೆದ ಐದು ದಿನದಿಂದ . ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪ್ರಕರಣದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ರಕ್ಷಣೆ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದ್ದು ಈವರೆಗೂ ಸರ್ಕಾರ ಯಾವುದೇ ರಕ್ಷಣೆ ಒದಗಿಸಿಲ್ಲ” ಎಂದು ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.

 

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

16 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

16 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago