Featured

ಎಸ್‌ ಪಿ ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ : ವಿಶ್ವದಾದ್ಯಂತ ಅಭಿಮಾನಿಗಳಿಂದ ಸಾಮೂಹಿಕ ಪ್ರಾರ್ಥನೆ -Vishwanews24

ಚೆನ್ನೈ: ಜನಪ್ರಿಯ ಹಿನ್ನಲೆ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿರುವ ಹಿನ್ನಲೆ ಎಸ್ ಪಿಬಿ ಅಭಿಮಾನಿಗಳು ಇಂದು ಅವರ ಶೀಘ್ರ ಚೇತರಿಕೆಗಾಗಿ ವಿಶ್ವದಾದ್ಯಂತ ಇಂದು ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಸದ್ಯ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಎಸ್ ಪಿಬಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ನಿನ್ನೆ ಸಂಜೆ ಎಸ್‌ಪಿಬಿ ಅವರ ಆರೋಗ್ಯದ ಕುರಿತು ಹೆಲ್ತ್‌ ಬುಲೆಟಿನ್ ರಿಲೀಸ್ ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ತಿಳಿಸಲಾಗಿದೆ.

ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಪಾಸಿಟಿವ್ ಆಗಿದ್ದರ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿದ್ದು, ವೆಂಟಿಲೇಟರ್‌ ಅಳವಡಿಸಲಾಗಿದೆ. ನುರಿತ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಗಮನ ನೀಡಿದೆ’ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಮಾಹಿತಿ ನೀಡಿದೆ. ಆಗಸ್ಟ್‌ 5ರಂದು ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆ.13ರಿಂದ ಎಸ್‌ಪಿಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ ಆರು ದಿನಗಳಿಂದ ಅವರು ಐಸಿಯುನಲ್ಲೇ ಇದ್ದಾರೆ. ಆರೋಗ್ಯದಲ್ಲಿ ಯಾವುದೇ ಗಮನಾರ್ಹ ಚೇತರಿಕೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ಎಸ್‌ಪಿಬಿ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ತಮಿಳು ಚಿತ್ರರಂಗದ ನಟ, ನಟಿಯರು ಸಂಜೆ 6ಗಂಟೆಯಿಂದ 6.05ರವರೆಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದಾರೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

8 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

8 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

8 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

8 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

8 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

8 hours ago