Featured

ಎಸ್‌.ಸಿ ಮತ್ತು ಎಸ್‌.ಟಿ ನೌಕರರ ಬಡ್ತಿಗೆ ಶಾಶ್ವತ ಸಮಿತಿ ರಚಿಸಿ : ಸಿದ್ದರಾಮಯ್ಯ -Vishwanews24

ಎಸ್‌.ಸಿ ಮತ್ತು ಎಸ್‌.ಟಿ ನೌಕರರ ಬಡ್ತಿಗೆ ಶಾಶ್ವತ ಸಮಿತಿ ರಚಿಸಿ : ಸಿದ್ದರಾಮಯ್ಯ -Vishwanews24

ಬೆಂಗಳೂರು: ‘ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌.ಟಿ) ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸಬೇಕು’ ಎಂದು ಆಗ್ರಹಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಪರಿಶಿಷ್ಟ ಜಾತಿ ಪತ್ತು ಪಂಗಡದ ನೌಕರರ ಸಂಘದ ಪದಾಧಿಕಾರಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು. ‘ಅನ್ಯಾಯಕ್ಕೆ ಒಳಗಾಗಿರುವ ನೌಕರರ ಹಿತ ಕಾಪಾಡಬೇಕು’ ಎಂದೂ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಎಸ್‌.ಸಿ, ಎಸ್‌.ಟಿ ಸರ್ಕಾರಿ ನೌಕರರ ಬಡ್ತಿ ವಿಚಾರವು ಅನೇಕ ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನತೆಗಳಿಂದಾಗಿ ನ್ಯಾಯಾಲಯಗಳು ಕೂಡಾ ಈ ಸಮಸ್ಯೆಯನ್ನು ಪರಿಹರಿಸಲು ಹಲವು ವರ್ಷಗಳನ್ನು ತೆಗೆದುಕೊಂಡಿದ್ದವು. ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಈ ವರ್ಗಗಳ 15 ಕ್ಕೂ ಹೆಚ್ಚು ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು’.

‘ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017ರಲ್ಲಿ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆ’ ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು. ಸುಪ್ರೀಂ ಕೋರ್ಟ್‌ ಕೂಡಾ  ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ, ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಈ ಸಮುದಾಯಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ’ ಎಂದೂ ಪತ್ರದಲ್ಲಿ ದೂರಿದ್ದಾರೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

35 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

54 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago