ಬೆಂಗಳೂರು: ‘ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್.ಟಿ) ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸಬೇಕು’ ಎಂದು ಆಗ್ರಹಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಪರಿಶಿಷ್ಟ ಜಾತಿ ಪತ್ತು ಪಂಗಡದ ನೌಕರರ ಸಂಘದ ಪದಾಧಿಕಾರಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಸಮಾಲೋಚನೆ ನಡೆಸಿದರು. ‘ಅನ್ಯಾಯಕ್ಕೆ ಒಳಗಾಗಿರುವ ನೌಕರರ ಹಿತ ಕಾಪಾಡಬೇಕು’ ಎಂದೂ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
‘ಎಸ್.ಸಿ, ಎಸ್.ಟಿ ಸರ್ಕಾರಿ ನೌಕರರ ಬಡ್ತಿ ವಿಚಾರವು ಅನೇಕ ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನತೆಗಳಿಂದಾಗಿ ನ್ಯಾಯಾಲಯಗಳು ಕೂಡಾ ಈ ಸಮಸ್ಯೆಯನ್ನು ಪರಿಹರಿಸಲು ಹಲವು ವರ್ಷಗಳನ್ನು ತೆಗೆದುಕೊಂಡಿದ್ದವು. ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಈ ವರ್ಗಗಳ 15 ಕ್ಕೂ ಹೆಚ್ಚು ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು’.
‘ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017ರಲ್ಲಿ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆ’ ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು. ಸುಪ್ರೀಂ ಕೋರ್ಟ್ ಕೂಡಾ ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ, ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಈ ಸಮುದಾಯಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ’ ಎಂದೂ ಪತ್ರದಲ್ಲಿ ದೂರಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…